

ಮಂಡ್ಯ: ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಗ್ರಾಮ ಪಂಚಾಯಿತಿ ಸದಸ್ಯನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮಂಜು ಎಂಬುವವರ ಸಂಬಂಧಿ, ಹಲಗೂರು ಗ್ರಾ.ಪಂ ಸದಸ್ಯ ಸುರೇಂದ್ರ ಎಂಬುವವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಿದ್ದಾರೆ.
ಮಳವಳ್ಳಿ ತಾಲೂಕು ಹಲಗೂರು ಪಟ್ಟಣದ ಜೆಪಿಎಂ ಬಡಾವಣೆಯಲ್ಲಿನ ಸುರೇಂದ್ರ ಅವರಿಗೆ ಸೇರಿದ ಮನೆ, ಸ್ವಗ್ರಾಮ ಗುಂಡಾಪುರ ಗ್ರಾಮದಲ್ಲಿ ಮನೆ ಹಾಗೂ ಮದ್ದೂರು ತಾಲೂಕಿನ ಎಸ್.ಐ ಹೊನ್ನಲಗೆರೆ ಗ್ರಾಮದ ಮನೆ ಮೇಲೆ ದಾಳಿ ನಡೆಸಿರುವ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.