More

    ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

    ಕುಷ್ಟಗಿ: ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರ ನಿರ್ಮೂಲನೆಯ ಪ್ರಯತ್ನದ ಜತೆಗೆ ವಿವಿಧ ಇಲಾಖೆಗಳ ಆಡಳಿತ ನಿರ್ವಹಣೆಯ ಮೇಲೆಯೂ ನಿಗಾವಹಿಸುತ್ತಿದೆ ಎಂದು ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ ಈಟಿ ಹೇಳಿದರು.

    ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸಾರ್ವಜನಿಕ ಕುಂದು ಕೊರತೆ ಹಾಗೂ ಅಹವಾಲು ಸಭೆಯಲ್ಲಿ ಬುಧವಾರ ಮಾತನಾಡಿದರು. ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಪಾರದರ್ಶಕ ಆಡಳಿತದೊಂದಿಗೆ ಜನಸ್ನೇಹಿಯಾಗಿ ವರ್ತಿಸಬೇಕು ಎಂದರು.

    ಜನರನ್ನು ಕಚೇರಿಗೆ ಅಲೆದಾಡಿಸಬಾರದು. ಕಡತಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಬೇಕು. ಯಾವುದೇ ಕೆಲಸಕ್ಕೆ ಅಧಿಕಾರಿಗಳು ಹಣದ ಬೇಡಿಕೆ ಇಟ್ಟರೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು. ಭ್ರಷ್ಟಾಚಾರ ನಿರ್ಮೂಲನೆ ಕಾರ್ಯದಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕಿದೆ ಎಂದರು.

    ತಹಸೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರ, ತಾಪಂ ಇಒ ನಿಂಗಪ್ಪ ಮಸಳಿ, ಲೋಕಾಯುಕ್ತ ಇನ್ಸ್‌ಪೆಕ್ಟರ್ ವಿಜಯಕುಮಾರ ಹಾಗೂ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ 6 ದೂರುಗಳು ಸಲ್ಲಿಕೆಯಾದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts