blank

ಮುಡಾ ಹಗರಣ; ಲೋಕಾಯುಕ್ತದಿಂದ ಸಿದ್ದರಾಮಯ್ಯ, ಪತ್ನಿಗೆ ಕ್ಲೀನ್​ಚಿಟ್​!; ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ: ಆರ್​.ಅಶೋಕ | Muda scam

blank

Muda scam: ಮುಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ ಎಂದು ಆರ್. ಅಶೋಕ ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ:ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಅಶೋಕ, ” ಮುಡಾ ಹಗರಣದಲ್ಲಿ ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ, ಸಚಿವರು, ಶಾಸಕರು ಆರೋಪಿ ಸಿದ್ದರಾಮಯ್ಯ ಹಾಗು ಅವರ ಧರ್ಮ ಪತ್ನಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಲೋಕಾಯುಕ್ತ ಪೊಲೀಸರೂ ಸ್ವಲ್ಪ ತಡವಾಗಿ ‘ಬಿ ರಿಪೋರ್ಟ್’ ರೂಪದಲ್ಲಿ ನೀಡಿದ್ದಾರೆ. ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips

ಒಂದೇ ಒಂದು ದಿನ ನೆಪಮಾತ್ರಕ್ಕೆ ಆರೋಪಿ ಸಿಎಂ ಸಿದ್ದರಾಮಯ್ಯ ಹಾಗು ಅವರ ಪತ್ನಿ ಅವರನ್ನು ವಿಚಾರಣೆ ನಡೆಸಿ ಕ್ಲೀನ್ ಚಿಟ್ ನೀಡಿರಿವುದು ರಾಜ್ಯ ಕಂಡ ‘ಐತಿಹಾಸಿಕ ದುರಂತ’. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ‘ನ್ಯಾಯ’ ಮಣ್ಣುಪಾಲಾಗಿದೆ. ಸಮರ್ಪಕ ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್ ನೀಡಿ ‘ನ್ಯಾಯದ ಸಮಾಧಿ’ ಮಾಡಿದೆ ಈ ದುಷ್ಟ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಷ್ಟ್ರಪ್ರಶಸ್ತಿ ವಿಜೇತ ರಿಷಬ್​ ಶೆಟ್ಟಿ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ, ಸಾಹಿತಿ!

ಕೋರ್ಟಿಗೆ ಸಂಪೂರ್ಣ ಸಾಕ್ಷ್ಯ ಒದಗಿಸದೆ ಪ್ರಕರಣವನ್ನ ಮುಚ್ಚಿ ಹಾಕಿ ಸತ್ಯದ ಸಮಾಧಿ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯನವರ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ. ಇಂದಲ್ಲ ನಾಳೆ, ಉಪ್ಪು ತಿಂದ ಸಿದ್ದರಾಮಯ್ಯನವರು ನೀರು ಕುಡಿಯಲೇಬೇಕು ಎಂದಿದ್ದಾರೆ.

Muda ಹಗರಣ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್​ಚಿಟ್ ನೀಡಿದ ಲೋಕಾಯುಕ್ತ!

Share This Article

ಬೆಲ್ಲ ತಿಂದ್ರೆ ಬೆಟ್ಟದಷ್ಟು ಉಪಯೋಗ! ಆದರೆ ಬೆಲ್ಲ ತಿನ್ನುವುದರಿಂದ ನಿಮ್ಮ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆಯೇ? Jaggery Benefits

Jaggery Benefits:  ಬೆಲ್ಲ ತಿಂದ್ರೆ ಬೆಟ್ಟದಷ್ಟು ಉಪಯೋಗಗಳಿವೆ. ಪ್ರತಿದಿನ ಬೆಳಗ್ಗೆ ಬೆಲ್ಲ ತಿಂದ್ರೆ ಆರೋಗ್ಯಕ್ಕೆ ತುಂಬಾ…

ಈ 3 ರಾಶಿಯವರು ತಮ್ಮ ತಾಯಂದಿರನ್ನು ದೇವತೆಯಂತೆ ನೋಡಿಕೊಳ್ಳುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಮನೆಯಲ್ಲೇ ಮಾಡಿ ಟೇಸ್ಟಿ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಉಪ್ಪಿನಕಾಯಿ ಇಲ್ಲದೆ ಊಟ ಸಂಪೂರ್ಣ ಎನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ…