More

    ಲೋಕಾಯುಕ್ತ ಪೊಲೀಸರ ಭರ್ಜರಿ ಬೇಟೆ: ಪ್ರಶಾಂತ್​ ಮಾಡಾಳ್​ ಮನೆಯಲ್ಲಿ 6 ಕೋಟಿ ರೂ. ನಗದು ವಶಕ್ಕೆ

    ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಮಾ. 02) ತಡರಾತ್ರಿ ವಶಪಡಿಸಿಕೊಂಡಿದ್ದಾರೆ.

    ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.

    ಇದನ್ನೂ ಓದಿ: ಕಿಚ್ಚನ ಮುಂದಿನ ಸಿನಿಮಾ ಬಿಲ್ಲ ರಂಗ ಬಾಷ! ಅನೂಪ್​ ಭಂಡಾರಿ ಕೊಟ್ಟ ಸುಳಿವಿಗೆ ಸುದೀಪ್​ ಫ್ಯಾನ್ಸ್​ ದಿಲ್​ ಖುಷ್​

    ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

    ಚನ್ನಗಿರಿಯಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪ ಕೂಡ ಬೆಂಗಳೂರಿಗೆ ಬಂದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅವರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

    ಗುರುವಾರ ಸಂಜೆ ಖಾಸಗಿ ಕಚೇರಿಯಲ್ಲಿ 2.42 ಕೋಟಿ ಮತ್ತು ಮಧ್ಯರಾತ್ರಿ ಡಾಲಸ್೯ ಕಾಲನಿಯ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ಸೇರಿ ಒಟ್ಟಾರೆ 8.42 ಕೋಟಿ ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಮರು ಸ್ಥಾಪನೆಯಾದ ಮೇಲೆ ಲೋಕಾ ಪೊಲೀಸರು ಭೇಟೆಯಾಡಿರುವ ದೊಡ್ಡ ಮೊತ್ತದ ಪ್ರಕರಣ ಇದಾಗಿದ್ದು, ಈ ಪ್ರಕರಣ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ.

    ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ: ಕಾಂಗ್ರೆಸ್​ಗೆ ಹೊಸ ಅಸ್ತ್ರ, ವಿರೂಪಾಕ್ಷಪ್ಪ ಬೆಂಬಲಿಗರ ಹೈಡ್ರಾಮ

    ದಾಳಿ ವೇಳೆ ಸಿಕ್ಕಿದ್ದು 1.62 ಕೋಟಿ ರೂ.; ಹೇಗಿತ್ತು ಕಾರ್ಯಾಚರಣೆ? ಲೋಕಾಯುಕ್ತ ಐಜಿ ಹೇಳಿದ್ದೇನು? ಇಲ್ಲಿದೆ ಪೂರ್ಣ ಮಾಹಿತಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts