ಲೋಕಾಯುಕ್ತ ಪೊಲೀಸರ ಭರ್ಜರಿ ಬೇಟೆ: ಪ್ರಶಾಂತ್​ ಮಾಡಾಳ್​ ಮನೆಯಲ್ಲಿ 6 ಕೋಟಿ ರೂ. ನಗದು ವಶಕ್ಕೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗೆ ಸಂಬಂಧಿಸಿದ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಶಾಂತ್ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ (ಮಾ. 02) ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಕೆಎಸ್​ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು 40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ಒಟ್ಟು 2.02 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. … Continue reading ಲೋಕಾಯುಕ್ತ ಪೊಲೀಸರ ಭರ್ಜರಿ ಬೇಟೆ: ಪ್ರಶಾಂತ್​ ಮಾಡಾಳ್​ ಮನೆಯಲ್ಲಿ 6 ಕೋಟಿ ರೂ. ನಗದು ವಶಕ್ಕೆ