

ಕಾರ್ಕಳ: ಕಾರ್ಕಳ ಪುರಸಭೆ ಕಚೇರಿಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.ಉ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಬಾಕಿ ಉಳಿದಿರುವ ಕಡತ ಹಾಗೂ ವಿಳಂಬದ ಕುರಿತು ಅಧಿಕಾರಿಗಳಿಂದ ವಾಹಿತಿ ಪಡೆದುಕೊಂಡರು.
ಖಾತಾ ವರ್ಗಾವಣೆ, ಜನನ ಮರಣ ಪ್ರವಾಣಪತ್ರ, ಉದ್ದಿಮೆ ಪರವಾನಗಿ ಹಾಗೂ ಇತರೆ ಕಾರ್ಯಗಳಲ್ಲಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಈ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪುರಸಭೆ ಕಚೇರಿಯ ಎಲ್ಲ ವಿಭಾಗಗಳ ಕಡತಗಳನ್ನು ಪರಿಶೀಲಿಸಿದರು.
ಪುರಸಭೆ ಕಚೇರಿ ವಾತ್ರವಲ್ಲದೆ, ತಾಲೂಕು ಕಚೇರಿಯ ರೆಕಾರ್ಡ್ ರೂಂಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ, ಕಳೆದ ಹತ್ತು ತಿಂಗಳಿಂದ ಬಾಕಿ ಉಳಿದಿದ್ದ ಪ್ರಮುಖ ಫೈಲ್ ಒಂದು ಪತ್ತೆಯಾಗಿದೆ.