ಕಾಣಿಯೂರು ಗ್ರಾಪಂಗೆ ಲೋಕಾಯುಕ್ತ ದಿಢೀರ್ ಭೇಟಿ

16
Published on

ಕಡಬ: ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯಿತಿ ಕಚೇರಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ದಾಖಲೆ ಪರಿಶೀಲಿಸಿದರು. ಸಿಬ್ಬಂದಿ ಶರತ್‌ಸಿಂಗ್ ಜತೆಗಿದ್ದರು. ಕೆಲಸಗಳಲ್ಲಿ ವಿಳಂಬ ಮಾಡದಂತೆ ಹಾಗೂ ಸಾರ್ವಜನಿಕರಿಗೆ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡದಂತೆ ಹಾಜರಿದ್ದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net