65 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಫ್​ಡಿಎ

101
Published on

ವಿಜಯನಗರ: ಎಫ್​ಡಿಎ(FDA) ಅಧಿಕಾರಿಯೊಬ್ಬರು 65 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೂವಿನ ಹಡಗಲಿಯ ತಹಶಿಲ್ದಾರರ ಕಚೇರಿಯ ಎಫ್​ಡಿಎ ವೆಂಕಟಸ್ವಾಮಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ನೌಕರ.

ಹಗರನೂರು ಗ್ರಾಮದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬುವವರು ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಕಲಂ 11 ತೆಗೆದು ಹಾಕಲು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವೇಳೆ ವೆಂಕಟಸ್ವಾಮಿ 70 ಸಾವಿರ ರೂ. ಹಣ ಬೇಡಿಕೆ ಇಟ್ಟಿದ್ದ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತ ಡಿವೈಎಸ್​ಪಿ, ಇನ್ಸ್ಪೆಕ್ಟರ್​ಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಇದೀಗ ಲೋಕಾಯುಕ್ತ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೆಂಕಟಸ್ವಾಮಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net