ಹಾವೇರಿ | 40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್​ಐ ಮತ್ತು ಪೇದೆ

Police
Published on

ಹಾವೇರಿ: ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್​​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಐಫೋನ್ ಬಳಕೆದಾರರೇ ಎಚ್ಚರ; ನಿಮ್ಮ ಬೆಲೆಬಾಳುವ ಫೋನ್​ಗಳೇ ಇವರ ಟಾರ್ಗೆಟ್

ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚೀನ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿಗಳು. ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ‌ ಮಾಡಿಸಿಕೊಡುವ ವಿಚಾರಕ್ಕೆ 50 ಸಾವಿರ ರೂ. ಬೇಡಿಕೆ ಇಟ್ಟಿದ್ದರು.

ವ್ಯಕ್ತಿಯೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಮೇರೆಗೆ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಆರೋಪಿ ಸ್ಥಾನದಲ್ಲಿರುವ ಪೊಲೀಸರು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ನಾಗರಹಾವಿನ ವಿಷ ಹೀರಿ ತಾಯಿ ಜೀವ ಉಳಿಸಿದ ಪುತ್ರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net