More

    ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸೂಚನೆ; ಸರ್ಕಾರಿ ಸೇವೆಯಲ್ಲಿ ಅನಗತ್ಯ ವಿಳಂಬ ಸಲ್ಲದು

    ಧಾರವಾಡ: ವಿವಿಧ ಇಲಾಖೆಗಳ ಸಾರ್ವಜನಿಕ ಕೆಲಸ ಕಾರ್ಯ ಮತ್ತು ಕಡತ ವಿಲೇವಾರಿಯಲ್ಲಿ ಅನಗತ್ಯ ವಿಳಂಬದ ದೂರುಗಳು ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಎಚ್ಚರಿಕೆ ನೀಡಿದರು.
    ನಗರದ ಜಿಲ್ಲಾ ಪಂಚಾ¬ತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

    • ವಿಜಯವಾಣಿ ವರದಿ ಪ್ರಸ್ತಾಪ:
      ಶಾಲಾ ಕm್ಟಡಗಳ ದುರವಸ್ಥೆ ಬಗ್ಗೆ ಪತ್ರಿಕೆ `ವಿಜಯವಾಣಿ’ ಇತ್ತೀಚೆಗೆ ಪ್ರಕಟಿಸಿದ್ದ ವರದಿಯನ್ನು ಲೋಕಾಯುಕ್ತರು ಸಭೆಯ ಗಮನಕ್ಕೆ ತಂದರು. ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿ ಇದ್ದರೆ ಕೂಡಲೇ ದುರಸ್ತಿ ಡಬೇಕು. ಮಕ್ಕಳ ಜೀವಕ್ಕೆ ಅಪಾಯಕಾರಿ ಇರುವ ಕೊಠಡಿಗಳನ್ನು ತೆರವು ಮಾಡಬೇಕು. ಅಲ್ಪ ಪ್ರಮಾಣದ ಖರ್ಚಿನಲ್ಲಿ ಶಾಲಾ ಕಿಟಕಿಗಳಿಗೆ ಮೆಶ್ ಅಳವಡಿಸಬೇಕು. ಇದರಿಂದ ಮಕ್ಕಳನ್ನು ಡೆಂಘೆ, ಚಿಕೂನ್ ಗುನ್ಯಾ ರೋಗಗಳಿಂದ ರಕ್ಷಿಸಬಹುದು ಎಂದರು.
      ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆ ಕೊರತೆ, ತ್ಯಾಜ್ಯ ನಿರ್ವಹಣೆ ಇಲ್ಲದಿರುವುದು ಅಲ್ಲಿ ಭೇಟಿ ನೀಡಿದಾಗ ಗಮನಕ್ಕೆ ಬಂದಿದೆ. ಬಡ, ಮಧ್ಯಮ ವರ್ಗದ ಜನ ಅವಲಂಬಿಸಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಮರ್ಪಕ ಚಿಕಿತ್ಸೆ ನೀಡದಿರುವುದು ಮಹಾಪಾಪ. ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಚಿಕಿತ್ಸೆ ನೀಡದಿದ್ದರೆ ಉಗ್ರ ಕ್ರಮ ಖಚಿತ ಎಂದು ನ್ಯಾ. ಪಾಟೀಲ ಎಚ್ಚರಿಕೆ ನೀಡಿದರು.
      ಅವಳಿನಗರದಲ್ಲಿ ಕಸ ಸಂಗ್ರಹ, ಕಸ ವಿಂಗಡಣೆ, ತ್ಯಾಜ್ಯ ನಿರ್ವಹಣೆ, ಸಾವಯವ ಗೊಬ್ಬರ ತಯಾರಿಕೆ ಕುರಿತು ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರಿಂದ ಮಾಹಿತಿ ಪಡೆದರು. ಪಾಲಿಕೆಯ ಉತ್ತಮ ಕಾರ್ಯವನ್ನು ಶ್ಲಾಘಿಸಿ ತ್ಯಾಜ್ಯ ನಿರ್ವಹಣೆಯಲ್ಲಿ ಇಂಧೋರ್ ಮಾದರಿ ಅಳವಡಿಸಿಕೊಂಡು ದೇಶಕ್ಕೆ ಮಾದರಿ ಆಗಬೇಕು ಎಂದು ಸೂಚಿಸಿದರು.
      ಸಭೆಯ ನಂತರ ಸುಮಾರು ೨೫ಕ್ಕೂ ಹೆಚ್ಚು ಸಾರ್ವಜನಿಕರು, ಸಂಘ- ಸಂಸ್ಥೆಗಳಿ0ದ ದೂರು ತ್ವರಿತ ಕ್ರಮಕ್ಕೆ ಶಿಫಾರಸು ಮಾಡಿದರು.
      ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ, ಜಿ.ಪಂ. ಸಿಇಒ ಸ್ವರೂಪ ಟಿ.ಕೆ, ಉಪ ಅರಣ್ಯ ಸಂರಕ್ಷಣಾಽಕಾರಿ ಸೋನಲ್ ವೃಷ್ಣಿ, ಲೋಕಾಯುಕ್ತ ಕಾರ್ಯದರ್ಶಿ ಶ್ರೀನಿವಾಸ, ಲೋಕಾಯುಕ್ತ ಎಸ್‌ಪಿ ಸತೀಶ ಚಿಟಗುಪ್ಪಿ ಹಾಗೂ ಜಿಲ್ಲಾ ಮಟ್ಟದ ಅಽಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts