ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ! ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬೇಟೆ, ಅಧಿಕಾರಿಗಳಿಗೆ ಶಾಕ್​

lokayuktha
Published on

ಬೆಂಗಳೂರು: ಇಂದು (ಜು.29) ಬೆಳ್ಳಂಬೆಳಗ್ಗೆಯೇ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ದಾಳಿಯಲ್ಲಿ ಭವ್ಯ ಬಂಗಲೆ, ಹೆಚ್ಚುವರಿ ಆಸ್ತಿ ಗಳಿಕೆ, ಕೆಜಿಗಟ್ಟಲೇ ಚಿನ್ನ ಹಾಗೂ ಭೂಮಿ ದಾಖಲೆಗಳು ಸಿಕ್ಕಿವೆ ಎಂದು ವರದಿಯಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆ, ಬಿಡಿಎ, ಸರ್ಕಾರಿ ಇಂಜಿನಿಯರ್​ಗಳು ಮತ್ತು ಆರೋಗ್ಯ ವಿಭಾಗದ ಅಧಿಕಾರಿಗಳು ಆದಾಯ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಲೋಕಾಯುಕ್ತ ದಾಳಿ ನಡೆಸಿದೆ. ಇನ್ನು ಚಿತ್ರದುರ್ಗದ ಹಿರಿಯೂರು ಟಿಎಚ್ಒ ಡಾ.ವೆಂಕಟೇಶ್​ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದ ತಂಡ ದಾಳಿ ನಡೆಸಿದ್ದು, ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್‌ ಮೇಲೆ ದಾಳಿ ನಡೆಸಿ, ಪರಿಶೀಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net