ಕಾಪು ದೇವಳಕ್ಕೆ ಲೋಕಾಯುಕ್ತ ಎಸ್ಪಿ ಭೇಟಿ : ಜೀರ್ಣೋದ್ಧಾರ ಕಾರ್ಯಕ್ಕೆ ಅಧಿಕಾರಿ ಮೆಚ್ಚುಗೆ

temple
ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಭೇಟಿ ನೀಡಿದರು
Published on

ಪಡುಬಿದ್ರಿ: ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದ ಅವರು ದೇವಳದ ವಾಸ್ತುಶಿಲ್ಪ, ನಿರ್ಮಾಣ ಕಾರ್ಯ ಹಾಗೂ ಮುಂದೆ ನಡೆಯಲಿರುವ ಕಾರ್ಯಗಳ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವಳದ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಸಂಚಾಲಕ ಜಯರಾಮ ಆಚಾರ್ಯ, ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರಿ, ಕಾತ್ಯಾಯಿನಿ ತಂಡದ ಸಂಚಾಲಕಿ ವನಿತಾ ಶೆಟ್ಟಿ, ಕಾಪು ಪೊಲೀಸ್ ಉಪನಿರೀಕ್ಷಕ ಪುರುಷೋತ್ತಮ, ಹೆಡ್ ಕಾನ್‌ಸ್ಟೇಬಲ್ ಪ್ರವೀಣ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net