More

    ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ, ಸಾಕ್ಷಿ ಸಮೇತ ಬಂಧನ

    ಚಿಕ್ಕಬಳ್ಳಾಪುರ: ಭೂಮಿ ಮಾಲೀಕರಿಂದ 1.5 ಲಕ್ಷ ರೂ ಲಂಚ ಪಡೆಯುತ್ತಿದ್ದ ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

    ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಇಒ ಜಿ.ಮುನಿರಾಜ (46) ಬಂಧಿತ ಆರೋಪಿ. ಭೂ ಪರಿವರ್ತಿತ ಜಮೀನಿನ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಲು 1.5 ಲಕ್ಷ ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ವೀರೇಂದ್ರ ಕುಮಾರ್, ಎಸ್‌ಐ ಮೋಹನ್ ಗೌಡ ನೇತೃತ್ವದ ತಂಡವು ದಾಳಿ ನಡೆಸಿದೆ.

    *ಪ್ರಕರಣದ ಹಿನ್ನೆಲೆ
    ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿಯ ನಂಜೇಗೌಡ ಎಂಬುವವರು 39 ಗುಂಟೆ ಪರಿವರ್ತಿತ ಜಮೀನಿನ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದು ಇದಕ್ಕೆ ಇಒ 2 ಲಕ್ಷ ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 1.5 ಲಕ್ಷ ರೂಗಳನ್ನು ಇಒ ಕಚೇರಿಯಲ್ಲಿ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಸಾಕ್ಷಿ ಸಮೇತ ಬಂಧಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts