More

    ಭ್ರಷ್ಟರಿಗೆ ಬೆಳಂಬೆಳ್ಳಗೆ ಶಾಕ್​ ನೀಡಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

    ಬೆಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಬೆಳಂಬೆಳ್ಳಗೆ ಏಕಕಾಲದಲ್ಲಿ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ ಶಾಕ್​ ಕೊಟ್ಟಿದ್ದಾರೆ. 17 ಇಲಾಖೆಯ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗಳೂರು, ಹಾಸನ, ಚಿತ್ರದುರ್ಗ, ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

    ಚಿತ್ರದುರ್ಗ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಬೆಳಂಬೆಳ್ಳಗೆ ದಾಳಿ ಮಾಡಲಾಗಿದೆ. ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ: ಬೌಲರ್​ಗಳ ಬಿಗಿ ದಾಳಿಗೆ ಕುಸಿದ ಆಂಗ್ಲರು; ಭಾರತಕ್ಕೆ 100ರನ್​ಗಳ ಭರ್ಜರಿ ಜಯ

    ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

    ಹಾಸನದಲ್ಲಿ KPTCL ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts