ಮುಡಾ ಹಗರಣ: ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ಲೋಕಾಯುಕ್ತ ನೋಟಿಸ್! | Lokayuktha

CM Siddaramaiah
Published on

ಬೆಂಗಳೂರು: ಮುಡಾ ಹಗರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ (Lokayuktha) ಇದೀಗ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್​ ರವಾನಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದೇ ನವೆಂಬರ್​ 06ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯಾದ್ಯಂತೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಲೋಕಾಯುಕ್ತ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದೆ.

ಇನ್ನು ತಮ್ಮ 40 ವರ್ಷಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸಲಿರುವ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ನೋಟಿಸ್​ ಬೆನ್ನಲ್ಲೇ ನಾನು ವಿಚಾರಣೆಗೆ ಆಗಮಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net