ದಾವಣಗೆರೆ: ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ದಾವಣಗೆರೆ ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಮಂಜು ಕೆ.ಆರ್ ಹಾಗೂ ನಗರ ಯೋಜನಾಧಿಕಾರಿ ಭರತ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಖಾಸಗಿ ಲೇ ಔಟ್ ಮಾಡುತ್ತಿದ್ದ ಶ್ರೀನಿವಾಸ ಅವರಲ್ಲಿ ಪರವಾನಿಗೆ ನೀಡಲು ಮಂಜು ಕೆ ಆರ್, ಭರತ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಧಿಕಾರಿಗಳಿಬ್ಬರು ಈಗಾಗಲೇ ಮುಂಗಡವಾಗಿ ಒಂದು ಲಕ್ಷ ರೂ. ಪಡೆದಿದ್ದರು. ಉಳಿದ ಎರಡು ಲಕ್ಷ ರೂ. ಲಂಚದ ಹಣವನ್ನು ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತ್ರತ್ವದಲ್ಲಿ, ಇನ್ಸ್ಪೆಕ್ಟರ್ಗಳಾದ ಆಂಜನೇಯ ಹಾಗೂ ರಾಷ್ಟ್ರಪತಿ ಅವರು ದಾಳಿ ನಡೆಸಿದ್ದಾರೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.