More

    ಲೋಕಸಭಾ ಚುನಾವಣೆ; ಮತದಾನದ ದಿನ ವೇತನ ಸಹಿತ ರಜೆ ಘೋಷಣೆ

    ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 07, 2024ರ ಮಂಗಳವಾರ ನಡೆಸಲಾಗುತ್ತಿದ್ದು, ಮತದಾನದ ದಿನದಂದು ವೇತನ ಸಹಿತ ಸಾವ್ರರ್ತಿಕ ರಜೆ ಘೋಷಿಸಲಾಗಿದೆ.

    ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಎರಡನೇ ಹಂತದಲ್ಲಿ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರುಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಹಾಗೂ ವಿಧಾನಸಭಾ ಉಪಚುನಾವಣೆಯು ಯಾದಗಿರಿ ಜಿಲ್ಲೆಯ ಶೋರಾಪುರ ಕ್ಷೇತ್ರಗಳಿಗೆ ನಡೆಯಲಿದೆ.
    ಈ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ ಶಾಲಾ ಕಾಲೇಜುಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಏಪ್ರಿಲ್ 26 ಮತ್ತು ಮೇ 07 ರಂದು ನಡೆಯುವ ಚುನಾವಣೆಗೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆ ಘೋಷಿಸಿದೆ.

    ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.
    ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts