

ನವದೆಹಲಿ: 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಘೋಷಣೆಯೊಂದಿಗೆ ಲೋಕಸಭೆ ಚುನಾವಣೆಗೆ ಧುಮುಕಿದ ಬಿಜೆಪಿ ನೇತೃತ್ವದ ಎನ್ ಡಿಎ ಬಹುಮತಕ್ಕೆ ಸೀಮಿತವಾದಂತಿದೆ. ಚುನಾವಣಾ ಆಯೋಗವು ಮಧ್ಯಾಹ್ನ 12 ಗಂಟೆಯವರೆಗೆ ಬಿಡುಗಡೆ ಮಾಡಿರುವ ಟ್ರೆಂಡ್‌ಗಳ ಪ್ರಕಾರ ಎನ್‌ಡಿಎ ಮೈತ್ರಿಕೂಟ 298 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಚುನಾವಣೋತ್ತರ ಸಮೀಕ್ಷೆಗಳನ್ನು ತಲೆಕೆಳಗೆ ಮಾಡುವಂತೆ 'ಇಂಡಿಯಾ' ಮೈತ್ರಕೂಟವು 2225 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 'ಇಂಡಿಯಾ' ಮೈತ್ರಿಕೂಟದ ಪಾಲುದಾರ ಪಕ್ಷಗಳಾದ ಸಮಾಜವಾದಿ ಪಕ್ಷ 33 ಸ್ಥಾನಗಳಲ್ಲಿ ಮತ್ತು ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ರಾಯಬರೇಲಿ ಮತ್ತು ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ 303 ಸ್ಥಾನಗಳನ್ನು ಗೆದ್ದಿದ್ದರೆ, ಎನ್‌ಡಿಎ 353 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದಿದ್ದರಿಂದ ಯುಪಿಎ 93 ಸ್ಥಾನಗಳಿಗೆ ಸೀಮಿತವಾಗಿತ್ತು.