

Today Gold Price: ಚಿನ್ನದ ಬೆಲೆಗಳು ಇದೀಗ ಆಕಾಶ ನೋಡುತ್ತಿವೆ. ಜನರ ಕೈಯಿಂದ ಮತ್ತಷ್ಟು ದೂರ ಓಡಲು ಚಿಂತಿಸುತ್ತಿದೆ. ಇದಕ್ಕೆ ಕಾರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಇತ್ತೀಚಿನ ಮಹತ್ವದ ಬೆಳವಣಿಗೆಗಳು. ಇದರ ಹಿನ್ನೆಲೆ ಚಿನ್ನದ ದರದಲ್ಲಿ ತೀವ್ರ ಏರಿಕೆ ಕಾಣುತ್ತಿವೆ. ಪರಿಣಾಮವಾಗಿ, ಚಿನ್ನದ ದರವು ಶೀಘ್ರವೇ 90,000 ರೂ. ಗಡಿ ದಾಟುವತ್ತ ದಾಪುಗಾಲಿಟ್ಟಿದೆ.
ಇಂದು (ಫೆ.10) ಬೆಳಗ್ಗೆ ದಾಖಲಾದ ಮಾಹಿತಿ ಪ್ರಕಾರ, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 390 ರೂ. ಹೆಚ್ಚಾಗಿದೆ. ಆದರೆ, 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 350 ರೂ. ಹೆಚ್ಚಳವಾಗಿದೆ. ಇದರೊಂದಿಗೆ, ಕಳೆದ ವಾರದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3,010 ರೂ. ಜಾಸ್ತಿಯಾಗಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆ ಸ್ಥಿರವಾಗಿದೆ. ವರದಿಗಳ ಪ್ರಕಾರ, ಕರ್ನಾಟಕ, ತೆಲುಗು ರಾಜ್ಯಗಳು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೀಗಿವೆ.
ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಬೆಲೆ 79,950 ರೂ. ಇದ್ದರೆ, 24 ಕ್ಯಾರೆಟ್‌ನ ಬೆಲೆ 87,210 ರೂ. ಆಗಿದೆ.
ಮುಂಬೈ, ಬೆಂಗಳೂರು ಮತ್ತು ಚೆನ್ನೈ ನಗರಗಳಲ್ಲಿ ಚಿನ್ನದ ಬೆಲೆ ಒಂದೇ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 79,800 ರೂ. ಆಗಿದ್ದರೆ, 24 ಕ್ಯಾರೆಟ್‌ನ ಬೆಲೆ 87,060 ರೂ. ತಲುಪಿದೆ.
ನವದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 99,500 ರೂ. ಇದೆ. ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,07,000 ರೂ. ಇದೆ. ಇದು ಗಮನಾರ್ಹ.
ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣ ಸೇರಿದಂತೆ ತೆಲುಗು ರಾಜ್ಯಗಳ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ದುಬಾರಿಯಾಗಿದೆ. ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 79,800 ರೂ. ಆಗಿದ್ದರೆ, 24 ಕ್ಯಾರೆಟ್‌ನ ಬೆಲೆ 87,060 ರೂ. ಆಗಿದೆ. ಬೆಳ್ಳಿಯ ಬೆಲೆ ಸ್ಥಿರವಾಗಿದೆ. ಇದರೊಂದಿಗೆ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪ್ರಮುಖ ನಗರಗಳಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,07,000 ರೂ. ತಲುಪಿದೆ,(ಏಜೆನ್ಸೀಸ್).