16 C
Bangalore
Thursday, December 12, 2019

ಭಾರತದ ಅಭಿವೃದ್ಧಿಗೆ ನಿಮ್ಮೊಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ: ಪ್ರಧಾನಿ ಮೋದಿಗೆ ಕಾಂಗ್ರೆಸ್​ ಟ್ವೀಟ್​

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಗುರುವಾರ ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ನೂತನ ಸಚಿವರಿಗೆ ಕಾಂಗ್ರೆಸ್​ ಟ್ವೀಟ್​ ಮೂಲಕ ಶುಭ ಕೋರಿ, ನಿಮ್ಮೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದೆ.

ಗುರುವಾರ ರಾತ್ರಿ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಪುಟ ಸಚಿವರಿಗೆ ಅಭಿನಂದನೆಗಳು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಕೋರುತ್ತೇವೆ. ಭಾರತ ಮತ್ತು ದೇಶದ ಎಲ್ಲ ನಾಗರಿಕರ ಅಭಿವೃದ್ಧಿಗಾಗಿ ನಿಮ್ಮೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದೆ.

ನಿನ್ನೆ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳಲ್ಲಿ ಪ್ರಚಂಡ ಗೆಲುವು ಸಾಧಿಸಿದರೆ, ಕಾಂಗ್ರೆಸ್​ ಕೇವಲ 52 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು. ಮೇ 23ರ ಫಲಿತಾಂಶ ದಿನ ಫಲಿತಾಂಶ ಹೊರಬೀಳುತ್ತಲೇ ಕಾಂಗ್ರೆಸ್​, ಬಿಜೆಪಿಗೆ ಅಭಿನಂದನೆ ಕೋರಿ ಟ್ವೀಟ್​ ಮಾಡಿತ್ತು.

ನಿರ್ಣಾಯಕ ಗೆಲುವು ಸಾಧಿಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಅಭಿನಂದನೆ. ದೇಶದ ಜನರು ಅವರ ನಿರ್ಧಾರವನ್ನು ತಿಳಿಸಿದ್ದಾರೆ. ನಾವು ಅದನ್ನು ಗೌರವಿಸುತ್ತೇವೆ. ನಮ್ಮ ಎಲ್ಲ ಕಾರ್ಯಕರ್ತರಿಗೂ ಧನ್ಯವಾದ ತಿಳಿಸುತ್ತೇನೆ. ಭಾರತ ಭವಿಷ್ಯದ ದೃಷ್ಟಿಯಲ್ಲಿ ಹೊಸ ಸರ್ಕಾರದೊಂದಿಗೆ ಒಟ್ಟಿಗೆ ಕೆಲಸ ನಿರ್ವಹಿಸಲು ಎದುರು ನೋಡುತ್ತಿದ್ದೇವೆ ಎಂದು ಟ್ವೀಟ್​ ಮಾಡಿದ್ದರು. (ಏಜೆನ್ಸೀಸ್​)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...