More

    ಪ್ರಜ್ವಲ್ ರೇವಣ್ಣಗೆ ಲುಕ್‌ ಔಟ್

    ಬೆಂಗಳೂರು: ಲೈಂಗಿಕ ಹಗರಣದಲ್ಲಿ ವಿಚಾರಣೆಗೆ ಗೈರಾದ ಬೆನ್ನಲ್ಲೇ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ದಳ(ಎಸ್‌ಐಟಿ) ಗುರುವಾರ ಲುಕ್‌ಔಟ್ ಜಾರಿಗೊಳಿಸಿದೆ.

    ವಿದೇಶಿದಿಂದ ಮರಳಿದಾಗ ವಶಕ್ಕೆ ಪಡೆಯುವಂತೆ ದೇಶದ ಎಲ್ಲ ವಿಮಾನ ನಿಲ್ದಾಣಗಳ ವಲಸೆ ವಿಭಾಗದ ಅಧಿಕಾರಿಗಳಿಗೆ ಎಸ್‌ಐಟಿ ಮನವಿ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

    ಲೈಂಗಿಕ ಹಗರಣ ಬೆಳಕಿಗೆ ಬಂದ ಬಳಿಕ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣಗೆ 24 ಗಂಟೆ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಏಪ್ರಿಲ್ 30ರಂದು ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ವಿಚಾರಣೆಗೆ ಹಾಜರಾಗಲು 7 ದಿನಗಳು ಕಾಲಾವಕಾಶ ಕೋರಿ ತಮ್ಮ ವಕೀಲರ ಮೂಲಕ ಎಸ್‌ಐಟಿಗೆ ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದರು.

    ಈ ಮನವಿಯನ್ನು ತಿರಸ್ಕರಿಸಿರುವ ಎಸ್‌ಐಟಿ, ವಿದೇಶದಲ್ಲಿರುವ ಸಂಸದರಿಗೆ ಬಿಸಿ ಮುಟ್ಟಿಸಿದ್ದಾರೆ. ಲೈಂಗಿಕ ಹಗರಣದಲ್ಲಿ ತಪ್ಪಿಸಿಕೊಂಡ ಆರೋಪಿ ಎಂದು ಲುಕ್ ಔಟ್ ನೋಟಿಸ್ ಜಾರಿಗೊಳಿಸಿರುವ ಎಸ್‌ಐಟಿ, ಸ್ವದೇಶಕ್ಕೆ ಮರಳಿದ ಕೂಡಲೇ ಪ್ರಜ್ವಲ್ ರೇವಣ್ಣ ಬಂಧಿಸಲು ಮುಂದಾಗಿದೆ.

    ದೇಶದ ಎಲ್ಲ ವಿಮಾನ ನಿಲ್ದಾಣಗಳ ವಲಸೆ ವಿಭಾಗದ ಅಧಿಕಾರಿಗಳಿಗೆ ಲುಕ್‌ಔಟ್ ಕಳುಹಿಸಿರುವ ಎಸ್‌ಐಟಿ, ವಿದೇಶದಿಂದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೂಡಲೇ ಸಂಸದನನ್ನು ವಶಕ್ಕೆ ಪಡೆಯುವಂತೆ ಎಸ್‌ಐಟಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts