More

    ಕಂದಕಕ್ಕುರುಳಿದ ಲಾರಿ

    ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ತಾಲೂಕಿನ ಇಡಗುಂದಿ ಸಮೀಪದ ಘರವಾಸ ಕ್ರಾಸ್ ಬಳಿ ಸಂಭವಿಸಿದೆ. ಅಂಕೋಲಾ ಕಡೆಯಿಂದ ಹುಬ್ಬಳ್ಳಿಯ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts