21.7 C
Bengaluru
Tuesday, January 21, 2020

ಲಾರಿ ಪಲ್ಟಿಯಾಗಿ ಕ್ಲೀನರ್ ಸಾವು

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

<ತೊಕ್ಕೊಟ್ಟಿನಲ್ಲಿ ಚರಂಡಿ ಸ್ಲ್ಯಾಬ್ ಕುಸಿದು ಘಟನೆ * ಸಾರ್ವಜನಿಕರಿಂದ ಪ್ರತಿಭಟನೆ>

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ತೊಕ್ಕೊಟ್ಟಿನಲ್ಲಿ ಸಂಚಾರಿ ಪೊಲೀಸರ ಸೂಚನೆ ಮೇರೆಗೆ ಲಾರಿ ನಿಲ್ಲಿಸಲು ಚಾಲಕ ರಸ್ತೆ ಬದಿ ಚಲಿಸಿದಾಗ ಕಾಂಕ್ರೀಟ್ ಸ್ಲ್ಯಾಬ್ ತುಂಡಾಗಿ ಲಾರಿ ಪಲ್ಟಿಯಾದ ಪರಿಣಾಮ ಕ್ಲೀನರ್, ಶಿವಮೊಗ್ಗ ಶಿಕಾರಿಪುರ ನಿವಾಸಿ ವಸಂತ ಕುಮಾರ್(25) ಮೃತಪಟ್ಟಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕಾರ್ಕಳ ಕಡೆಯಿಂದ ಉಳ್ಳಾಲದ ಮೀನಿನ ತೈಲ ಕಾರ್ಖಾನೆಗೆ ಕಟ್ಟಿಗೆ ಸಾಗಾಟ ಮಾಡಲಾಗುತ್ತಿದ್ದ ಲಾರಿ ತೊಕ್ಕೊಟ್ಟು ಜಂಕ್ಷನ್ ತಲುಪಿದಾಗ ಸಂಚಾರಿ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಪೊಲೀಸರು ಸೂಚಿಸಿದಲ್ಲಿ ಜಾಗ ಇಲ್ಲದ ಕಾರಣ ಚಾಲಕ ಸ್ಥಳದಿಂದ ಅರ್ಧ ಕಿ.ಮೀ ಮುಂದೆ ರಾಷ್ಟ್ರೀಯ ಹೆದ್ದಾರಿ ಬದಿ ಚರಂಡಿಗೆ ಹಾಸಲಾದ ಕಾಂಕ್ರೀಟ್ ಮೇಲೆ ನಿಲ್ಲಿಸಲು ಮುಂದಾಗಿದ್ದಾರೆ. ಈ ಸಂದರ್ಭ ಕಳಪೆಯಾಗಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್ ತುಂಡಾಗಿ ಲಾರಿ ಹಿಂಬದಿ ಚಕ್ರ ಚರಂಡಿಯೊಳಕ್ಕೆ ಬಿದ್ದು ಪಲ್ಟಿಯಾಗಿದೆ. ಘಟನೆಯಿಂದ ಗಾಬರಿಗೊಂಡು ಕ್ಲೀನರ್ ವಸಂತ ಕುಮಾರ್ ಅವರು ಹೊರಗಡೆ ಹಾರಿ ಪಾರಾಗಲು ಯತ್ನಿಸುವಾಗ ಲಾರಿಯಡಿ ಬಿದ್ದಿದ್ದಾರೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ತಕ್ಷಣ ಸಾರ್ವಜನಿಕರು ಸ್ಥಳದಲ್ಲಿ ಕಾಮಗಾರಿ ನಿರತ ಹಿಟಾಚಿ ತಂದು ಲಾರಿಯನ್ನು ಎತ್ತಿ ಕ್ಲೀನರ್ ವಸಂತ ಕುಮಾರ್ ಅವರನ್ನು ಹೊರತೆಗೆದಿದ್ದಾರೆ. ಅದಾಗಲೇ ಸುಮಾರು 10 ನಿಮಿಷ ಲಾರಿಯಡಿ ಸಿಲುಕಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಾಹನ ತಡೆದು ಪ್ರತಿಭಟನೆ: ಸ್ಥಳದಲ್ಲಿ ಸೇರಿದ ಸುಮಾರು 500ಕ್ಕೂ ಹೆಚ್ಚು ಮಂದಿ ಸಂಚಾರಿ ಪೊಲೀಸರ ಬೇಜವಾಬ್ದಾರಿ ಖಂಡಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಮಧ್ಯಾಹ್ನ ಒಂದು ಗಂಟೆವರೆಗೆ ನಡೆದ ಪ್ರತಿಭಟನೆಯಿಂದ ಹಲವು ಕಿ.ಮೀವರೆಗೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿತ್ತು.

ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್‌ಐ ಹಾಗೂ ಇಬ್ಬರು ಸಂಚಾರಿ ಪೊಲೀಸರು ಜನ, ವಾಹನ ದಟ್ಟಣೆಯಿರುವ ತೊಕ್ಕೊಟ್ಟು ಜಂಕ್ಷನ್‌ನಲ್ಲೇ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಮೀಷನರ್, ಡಿ.ಸಿ ಭೇಟಿಗೆ ಪಟ್ಟ: ಅಪಘಾತದಲ್ಲಿ ಸಾವನ್ನಪ್ಪಿದ ಯುವಕನ ಕುಟುಂಬಕ್ಕೆ ಶೀಘ್ರ ಪರಿಹಾರ ನೀಡಬೇಕು. ಹಿಂದಿನ ನಾಲ್ಕು ಅಪಘಾತ ಪ್ರಕರಣಗಳ ತನಿಖೆ ನಡೆಸಬೇಕು. ರಸ್ತೆ ಕಾಮಗಾರಿ ಮುಗಿಯುವವರೆಗೆ ಟೋಲ್ ಸಂಗ್ರಹಿಸಬಾರದು ಎಂದು ಆಗ್ರಹಿಸಿದ ಸಾರ್ವಜನಿಕರು ಸ್ಥಳಕ್ಕೆ ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿ ಭೇಟಿ ನೀಡುವಂತೆ ಪಟ್ಟು ಹಿಡಿದರು.

ಅಪರಾಧ ಮತ್ತು ಸಂಚಾರಿ ವಿಭಾಗ ಡಿಸಿಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಂಚಾರಿ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ಮಂಜುನಾಥ ಶೆಟ್ಟಿ, ಅಪರಾಧ ವಿಭಾಗದ ರಾಮರಾವ್, ಸಂಚಾರಿ ಠಾಣಾಧಿಕಾರಿ ಗುರುದತ್ ಕಾಮತ್, ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರೂ ಪ್ರತಿಭಟನಾಕಾರರು ಕದಲಲಿಲ್ಲ. ಇದರಿಂದ ಸ್ಥಳದಲ್ಲಿ ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...