Lorry Accident : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 9 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ.
ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿದ ಲಾರಿ ಪಲ್ಟಿಯಾದ ಪರಿಣಾಮ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅವಘಡದಲ್ಲಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಂತೆ ಹಿನ್ನೆಲೆಯಲ್ಲಿ ತರಕಾರಿ ತುಂಬಿದ ಲಾರಿಯು ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ತಿಳಿದುಬಂದಿದೆ.
ಲಾರಿಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಬರುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಯಲ್ಲಾಪುರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಕಂತಲೇ ಕಿಸ್ಸಿಂಗ್ ದೃಶ್ಯ ಸೇರಿಸಿದ್ರಾ ಧನುಷ್!? ಬಿರುಗಾಳಿ ಎಬ್ಬಿಸಿದ ಖ್ಯಾತ ನಿರ್ದೇಶಕನ ಹೇಳಿಕೆ! Dhanush