ಭೀಕರ ಅಪಘಾತ: ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

Ambulance (1)
Published on

ವಿಜಯಪುರ: ಲಾರಿ ಹಾಗೂ ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಸಾವೀಡಾದ ವ್ಯಕ್ತಿ. ಆ್ಯಂಬುಲೆನ್ಸ್‌ನಲ್ಲಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ್ಯಂಬುಲೆನ್ಸ್ ಸಿಂದಗಿಯಿಂದ ಹಂಚಿನಾಳ ಗ್ರಾಮಕ್ಕೆ ರೋಗಿಯನ್ನು ತರಲು ಹೋಗುತ್ತಿದ್ದಾಗ ಸಿಂದಗಿಯಿಂದ ಕಲಬುರಗಿಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net