

ಆನೇಕಲ್: ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಮಗುಚಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ತಮಿಳುನಾಡಿಗೆ ಸೇರಿದ ಕಾರು ಬೆಂಗಳೂರಿನತ್ತ ತೆರಳುತ್ತಿದ್ದು. ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಮುಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಲ್ಲಿ ಕಲ್ಲಿನಿಂದ ತುಂಬಿ ಕಾರಿನಲ್ಲಿದ್ದ ಜಗದೀಶ್ ಕುಮಾರ್ ಮತ್ತು ಪವನ್ ಕುಮಾರ್ ಕಾರಿನಲ್ಲಿಯೇ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಮೃತರು ತಮಿಳುನಾಡು ಮೂಲದವರು, ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಿದ್ದರು.