

ಉಪ್ಪಿನಂಗಡಿ: ಇಲ್ಲಿನ ಕೂಟೇಲು ಸೇತುವೆ ಬಳಿ ಲಾರಿ ಮತ್ತು ಬೈಕಿನ ನಡುವೆ ಮಂಗಳವಾರ ಡಿಕ್ಕಿ ಸಂಭವಿಸಿ ಬೈಕ್ ಸವಾರ ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರೆಬಂಡಾಡಿ ಗ್ರಾಮ ನಿವಾಸಿ ಯತೀಶ್(20) ಹಾಗೂ ಉಪ್ಪಿನಂಗಡಿ ಪೇಟೆ ನಿವಾಸಿ ಅವನೀಶ್(20) ಎಂಬುವರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಲಾರಿಯೊಂದಕ್ಕೆ ಸಿಲುಕಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳಿಬ್ಬರನ್ನೂ ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.