ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು..

Bike Lorry
Published on

ವಿಜಯಪುರ: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂರು ವರ್ಷದ ಮಗು ಜತೆಗೆ ಅಣ್ಣ-ತಂಗಿ ಕೂಡ ಸ್ಥಳದಲ್ಲೇ ಮೃತಪಟ್ಟಿರುವ ಸುದ್ದಿಯ ಬೆನ್ನಿಗೇ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದುಹೋಗಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸಾಲೊಟಗಿ ಗ್ರಾಮದ ಅಂಬಣ್ಣ ನೇದಲಗಿ (35) ಹಾಗೂ ಸತೀಶ ರಾಂಪೂರ (25) ಮೃತಪಟ್ಟವರು. ಇವರು ಝಳಕಿಯಿಂದ ಸಾಲೊಟಗಿಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಝಳಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net