Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ಲಾರಿ ಪಲ್ಟಿ: ಅಕ್ರಮವಾಗಿ ಸಾಗಿಸುತ್ತಿದ್ದ 8 ದನಗಳು ಸಾವು

Friday, 10.08.2018, 12:53 PM       No Comments

ಚಿತ್ರದುರ್ಗ: ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಟು ದನಗಳು ಸ್ಥಳದಲ್ಲೇ ಮೃತಪಟ್ಟಿವೆ.

ಹೊಸದುರ್ಗ ತಾಲೂಕಿನ ಮಾಡದಕೆರೆ ಬಳಿ ಘಟನೆ ನಡೆದಿದ್ದು, ಪೂರ್ತಿ ಮುಚ್ಚಿರುವ ಗೂಡ್ಸ್ ಲಾರಿಯಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ದನಗಳ ಆಕ್ರಂದನ ಕೇಳಿ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದು, 22 ದನಗಳನ್ನು ರಕ್ಷಿಸಿದ್ದಾರೆ. ಗ್ರಾಮಸ್ಥರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಲಾರಿ ಚಾಲಕ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ದನಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಶಂಕೆ ವ್ಯಕ್ತವಾಗಿದ್ದು, ಹೊಸದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top