ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು

ಬೆಳ್ತಂಗಡಿ: ಹಳೆಕೋಟೆ ಬಳಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ಕಸಬಾ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತ್ತಿದ್ದ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮಚ್ಚಿನ ಗ್ರಾಮದ ಕೃಷಿಕ ವಿನೋದ್ ಗೌಡ(45) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ.

Share This Article

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…