More

    ಗಲಭೆಕೋರರಿಂದಲೇ ನಷ್ಟ ವಸೂಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

    ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.

    ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದ ದಾಂಧಲೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.

    ಇದನ್ನೂ ಓದಿರಿ ಡಿಜೆ ಹಳ್ಳಿ ಗಲಭೆ ಆರಂಭದ ಆ ಕ್ಷಣ… ಪೊಲೀಸ್​ ಠಾಣೆಯಲ್ಲಿದ್ದುಕೊಂಡೇ ಸಾವಿರಾರು ಜನರನ್ನು ಕರೆಸಿಕೊಂಡ ದುಷ್ಕರ್ಮಿಗಳು

    ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ವೇಳೆ ಸಾರ್ವಜನಿಕ ಆಸ್ತಿ ಹಾಳು ಮಾಡಿದವರನ್ನು ಸಿಸಿಟಿವಿ ಫೂಟೇಜ್​ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿ ಗಲಭೆಕೋರರಿಂದಲೇ ನಷ್ಟ ವಸೂಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಮೂಲಕ ಗುರುತಿಸಲಾಗುವುದು. ಅವರಿಂದಲೇ ನಷ್ಟ ವಸೂಲು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

    ಗಲಭೆಗಳು ಸಂಭವಿಸಿದಾಗ ಆಗುವ ಹಾನಿಯನ್ನು ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂದು ಸುಪ್ರೀಂಕೋರ್ಟ್ ಈ ಹಿಂದೆ ಆದೇಶ ನೀಡಿದೆ. ಅದನ್ನು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೂ ಅನ್ವಯಿಸಲಾಗುವುದು. ಗಲಭೆಕೋರರ ಆಸ್ತಿಪಾಸ್ತಿ ಮಾರಾಟ ಮಾಡಿ, ಗಲಭೆಯಿಂದ ಆಗಿರುವ ನಷ್ಟ ತುಂಬಿಕೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.

    ಮಂಗಳವಾರ ರಾತ್ರಿ ಕಾವಲ್​ಭೈರಸಂದ್ರ ವಾರ್ಡ್​ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಶಾಸಕರ ಮನೆ, ಪೊಲೀಸ್​ ಠಾಣೆ, ಅಂಗಡಿಗಳು ಸೇರಿದಂತೆ ಸಿಕ್ಕಸಿಕ್ಕ ವಾಹನಗಳ ಮೇಲೂ ಕಿಡಿಗೇಡಿಗಳ ಗುಂಪು ಮನಸೋ ಇಚ್ಛೆ ದಾಂಧಲೆ ನಡೆಸಿತ್ತು. ಡಿಜೆ ಹಳ್ಳಿ ಪೊಲೀಸ್​ ಠಾಣೆ, ಶಾಸಕ ಶ್ರೀನಿವಾಸ ಮೂರ್ತಿ ಅವರ ಮನೆಗೂ ಬೆಂಕಿ ಇಟ್ಟು ವಿಕೃತಿ ಮೆರೆದದ್ದರು. ಪೊಲೀಸರು, ಪತ್ರಕರ್ತರ ಮೇಲೂ ಕಲ್ಲುತೂರಾಟ, ಬಾಟಲಿಗಳನ್ನು ಎಸೆದು ಇಡೀ ಏರಿಯಾವನ್ನೇ ಪ್ರಕ್ಷುಬ್ಧ ಸ್ಥಿತಿಗೆ ತಂದೊಡ್ಡಿದ್ದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಹಾರಿಸಿದ ಗುಂಡೇಟಿಗೆ ಮೂವರು ಬಲಿಯಾಗಿದ್ದಾರೆ.

    ಈ ಗಲಭೆಗೆ ಶಿವಾಜಿನಗರದಲ್ಲಿ ಧಾರ್ಮಿಕ ಶಾಲೆ ನಡೆಸುತ್ತಿರುವ ಸೈಯದ್ ಅಜ್ನಾನ್, ಎಸ್‌ಡಿಪಿಐ ಪಕ್ಷದ ಮುಖಂಡ ಮುಜಾಮಿಲ್ ಪಾಷ ಪ್ರಮುಖ ಕಾರಣ ಎಂದು ಪೊಲೀಸ್​ ತನಿಖೆಯಲ್ಲಿ ಗೊತ್ತಾಗಿದ್ದು, ಅವರಿಬ್ಬರನ್ನೂ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ 137 ಮಂದಿಯನ್ನು ಬಂಧಿಸಲಾಗಿದೆ.

    ನಾನು ಹುಟ್ಟಿ ಬೆಳೆದ ಮನೆಯನ್ನು ಸುಟ್ಟು‌ ಹಾಕಿದ್ದಾರೆ… ಗಲಭೆಕೋರರಿಗೆ ಕಠಿಣ ಶಿಕ್ಷೆ ಆಗಲೇ ಬೇಕು: ಅಖಂಡ ಶ್ರೀನಿವಾಸಮೂರ್ತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts