More

    ಲಾಟರಿ ಮೂಲಕ ಫಲಾನುಭವಿ ಆಯ್ಕೆ ಕೈ ಬಿಡಿ – ಹೈಕ ಪ್ರದೇಶ ವಾಲ್ಮೀಕಿ ನಾಯಕ ಸಂಘ ಒತ್ತಾಯ

    ರಾಯಚೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಾಯ ಧನದಲ್ಲಿ ನೀಡುವ ಸರಕು ಸಾಗಣೆ ವಾಹನ ಫಲಾನುಭವಿಗಳನ್ನು ವಯೋಮಾನದ ಆಧಾರದ ಮೇಲೆ ಆಯ್ಕೆ ಮಾಡುವಂತೆ ಒತ್ತಾಯಿಸಿ ಹೈಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ನಗರದ ಡಿಸಿ ಕಚೇರಿಯ ಎಡಿಸಿ ದುರಗೇಶಗೆ ಬುಧವಾರ ಮನವಿ ಸಲ್ಲಿಸಿದರು.

    ಸರಕು ಸಾಗಣೆ ವಾಹನ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಪ್ರವಾಸೋದ್ಯಮ ಹಾಗೂ ಇತರೆ ಇಲಾಖೆಗಳಲ್ಲಿ ವಯಸ್ಸು, ವಿದ್ಯಾಭ್ಯಾಸ ಮತ್ತು ಅನುಭವ ಇತರೆ ಮಾನದಂಡಗಳ ಆಧಾರದ ಮೇಲೆ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆದರೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಲಾಟರಿ ಮೂಲಕ ಆಯ್ಕೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು. ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಯಕ, ಶ್ರವಣಕುಮಾರ್ ನಾಯಕ, ವೀರೇಶ ನಾಯಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts