ತುಳು ಭಾಷೆ, ಸಂಸ್ಕೃತಿ ಬಗ್ಗೆ ಪ್ರೀತಿ: ಎಂ.ಬಾಹುಬಲಿ ಪ್ರಸಾದ್​ ಆಶಯ

Mbd_tulu
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ತುಳು ಭಾಷೆ ಮತ್ತು ಸಂಸತಿ ಬಗ್ಗೆ ಪ್ರೀತಿ ಅಭಿಮಾನದ ಜತೆ ಸಂಟನಾತ್ಮಕವಾಗಿ ಒಂದುಗೂಡಿದರೆ ಯಾವುದೇ ಕಾರ್ಯದಲ್ಲಿಯೂ ಯಶಸ್ಸು ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಮೂಡುಬಿದಿರೆ ತುಳುಕೂಟದ ಸದಸ್ಯರು ಮಾಡಿದ ಸಾಧನೆ ಪ್ರಶಂಸನೀಯವಾದುದು ಎಂದು ಬೆದ್ರ ತುಳುಕೂಟದ ಗೌರವಾಧ್ಯಕ್ಷ ಎಂ.ಬಾಹುಬಲಿ ಪ್ರಸಾದ್​ ಹೇಳಿದರು.

ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ನೇತೃತ್ವದಲ್ಲಿ ಇತ್ತೀಚೆಗೆ ಮಂಗಳೂರಿನ ಪುರಭವನದಲ್ಲಿ ನಡೆದ ಜಾನಪದ ಉಚ್ಛಯ& 2024 ನಮ್ಮ ತುಳುನಾಡ್​ ಕಲಾ ಪಂಥ ಸ್ಪರ್ಧೆಯಲ್ಲಿ ಐವತ್ತು ಸಾವಿರ ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆ ತುಳುಕೂಟದ ಸದಸ್ಯರು ಮತ್ತು ಕಲಾವಿದರ ತಂಡಕ್ಕೆ ಸ್ಕೌಟ್ಸ್​ ಗೈಡ್ಸ್​ ಕನ್ನಡ ಭವನದಲ್ಲಿ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಳುಕೂಟದ ಅಧ್ಯಕ್ಷ ಹಂಡೇಲುಗುತ್ತು ಧನಕೀರ್ತಿ ಬಲಿಪ ಅಧ್ಯಕ್ಷತೆ ವಹಿಸಿದ್ದರು. ತುಳುಕೂಟದ ಉಪಾಧ್ಯಕ್ಷ ಸಂಪತ್​ ಸಾಮ್ರಾಜ್ಯ ಅಭಿನಂದನಾ ಮಾತುಗಳನ್ನಾಡಿದರು. ತಂಡದ ನಿರ್ದೇಶಕ ಪ್ರಶಾಂತ್​ ಕೈಕಂಬ ಅವರನ್ನು ಸನ್ಮಾನಿಸಲಾಯಿತು. ತಂಡದಲ್ಲಿ ಭಾಗವಹಿಸಿದ ಸದಸ್ಯರು ಮತ್ತು ಕಲಾವಿದರನ್ನು ಪ್ರಮಾಣಪತ್ರದೊಂದಿಗೆ ಪುರಸ್ಕರಿಸಲಾಯಿತು.

ಸ್ಥಾಪಕಾಧ್ಯಕ್ಷ ಚಂದ್ರಹಾಸ ದೇವಾಡಿಗ, ಕಾರ್ಯದರ್ಶಿ ಕೆ.ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. ಚೇತನಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿದರು. ಜಿನೇಂದ್ರ ಹೆಗ್ಡೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net