20.3 C
Bangalore
Sunday, December 15, 2019

ಕೊಲೆಗೆ ಪ್ರೇಮಪಾಶ ಮೂರನೇ ಪ್ರಮುಖ ಕಾರಣ!

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ನವದೆಹಲಿ: ದೇಶದಲ್ಲಿ ನಡೆದ ಕೊಲೆಗಳಿಗೆ ಮುಖ್ಯವಾಗಿ ವೈಯಕ್ತಿಕ ದ್ವೇಷ, ಆಸ್ತಿ ಕಲಹ ಮತ್ತು ಪ್ರೀತಿ-ಪ್ರೇಮ ಪ್ರಮುಖ ಕಾರಣಗಳಾಗಿವೆ. ವೈಯಕ್ತಿಕ ದ್ವೇಷದ ಕೊಲೆಗಳ ಸಂಖ್ಯೆ ಶೇ.4.3 ಹಾಗೂ ಆಸ್ತಿ ಕಲಹ ಸಂಬಂಧಿತ ಹತ್ಯೆ ಶೇ.12ರಷ್ಟು ಇಳಿಕೆಯಾಗಿವೆ. ಆದರೆ ಪ್ರೀತಿ-ಪ್ರೇಮಕ್ಕಾಗಿ ನಡೆದ ಕೊಲೆಗಳ ಪ್ರಮಾಣ ಶೇ.28ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಅಪರಾಧ ದಾಖಲಾತಿ ಬ್ಯೂರೊ (ಎನ್​ಸಿಆರ್​ಬಿ) ಬಿಡುಗಡೆ ಮಾಡಿರುವ ವರದಿಯಲ್ಲಿ 2001ರಿಂದ 2017ರವರಗೆ ಹತ್ಯೆ ಮತ್ತು ಅದರ ಉದ್ದೇಶವನ್ನು ವಿವರಿಸಲಾಗಿದೆ. ವೈಯಕ್ತಿಕ ದ್ವೇಷಕ್ಕೆ 67,774 ಹಾಗೂ ಆಸ್ತಿ ಕಲಹಕ್ಕೆ 51,554 ಕೊಲೆಗಳಾಗಿವೆ. ಪ್ರೇಮದ ಹಿನ್ನೆಲೆಯಲ್ಲಿ 44,412 ಕೊಲೆಗಳಾಗಿದ್ದು, ಇವುಗಳ ಪ್ರಮಾಣ 2001ಕ್ಕೆ ಹೋಲಿಸಿದರೆ 2017ರಲ್ಲಿ ಶೇ.28ರಷ್ಟು ಏರಿಕೆಯಾಗಿದೆ. ಪ್ರೇಮ ಪ್ರಕರಣದ ಕಾರಣ 2015ರಲ್ಲಿ 1,379, 2016ರಲ್ಲಿ 1,493 ಹಾಗೂ 2017ರಲ್ಲಿ 1,390 ಕೊಲೆಗಳು ನಡೆದಿವೆ. ಇದರಲ್ಲಿ ಅನೈತಿಕ ಸಂಬಂಧದ ಕಾರಣ ನಡೆದ ಕೊಲೆಗಳೂ ಸೇರಿವೆ. ದೇಶದಲ್ಲಿ ಅತಿಹೆಚ್ಚಿನ ಕೊಲೆಗಳು ನಡೆದ ಮೊದಲ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಪಂಜಾಬ್​ಗಳಿವೆ. ತಮಿಳುನಾಡು, ಕರ್ನಾಟಕ, ದೆಹಲಿ ನಂತರದ ಸ್ಥಾನಗಳಲ್ಲಿವೆ. ಕೇರಳ ಕೊನೆಯ ಸ್ಥಾನದಲ್ಲಿದೆ.

ಜಾಲತಾಣ ಪ್ರಭಾವವೂ ಕಾರಣ

ಪ್ರೇಮ ನಿಮಿತ್ತದ ಕೊಲೆಗಳ ಪ್ರಮಾಣ ಹೆಚ್ಚಾಗಲು ಇತ್ತೀಚಿನ ವರ್ಷಗಳಲ್ಲಿ ಯುವ ಸಮುದಾದಯದಲ್ಲಿ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗಿರುವುದು ಕೂಡ ಪ್ರಮುಖ ಕಾರಣವಾಗಿದೆ. ಜಾಲತಾಣಗಳಲ್ಲಿ ಹರಿದಾಡುವ ಹೀನ ಕೃತ್ಯಗಳು, ಅಶ್ಲೀಲ ವಿಡಿಯೋಗಳು, ಸುದ್ದಿಗಳನ್ನು ನೋಡಿ ಅಪರಾಧ ಲೋಕದೆಡೆಗೆ ಅನೇಕರು ವಾಲುತ್ತಿದ್ದಾರೆ. ಜಾಲತಾಣಗಳಿಂದ ಉಂಟಾಗುವ ಪರಿಚಯಗಳು ಪ್ರೇಮಕ್ಕೆ ತಿರುಗಿ ಬಳಿಕ ಕೊಲೆಗಳಲ್ಲಿ ಅಂತ್ಯವಾದ ನೂರಾರು ಘಟನೆಗಳು ನಡೆದಿವೆ. ಹೀಗಾಗಿ ಸರ್ಕಾರ ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಕಠಿಣ ನಿಯಂತ್ರಣ ಕ್ರಮ ತರಬೇಕು, ಇಂಟರ್ನೆಟ್ ಶುಲ್ಕ ಹೆಚ್ಚಳ ಮಾಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...