25.5 C
Bangalore
Monday, December 16, 2019

ಲವ್ ಜಿಹಾದ್​ಗೆ ರಾಜ್ಯದ ನಂಟು!?

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಬೆಂಗಳೂರು: ಐದು ತಿಂಗಳ ಹಿಂದೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿದ್ದ ಕೇರಳದ ಲವ್ ಜಿಹಾದ್ ಪ್ರಕರಣವೊಂದಕ್ಕೆ ರಾಜ್ಯದ ಹಿರಿಯ ಅಧಿಕಾರಿಯೊಬ್ಬರ ಕುಟುಂಬದ ನಂಟಿರುವ ಆರೋಪ ಕೇಳಿಬಂದಿದೆ. ಕಲಬುರಗಿಯಲ್ಲಿ ವಾಣಿಜ್ಯ ತೆರಿಗೆ ಉಪ ಆಯುಕ್ತರಾಗಿರುವ ಇರ್ಷಾದ್ ಖಾನ್ ಅವರ ಬೆಂಗಳೂರಿನ ಮನೆ ಮೇಲೆ ಇತ್ತೀಚೆಗೆ ದಾಳಿ ಮಾಡಿದ ರಾಷ್ಟ್ರೀಯ ತನಿಖಾ ದಳದ (ಎನ್​ಐಎ) ಕೇರಳ ತಂಡ, ಲ್ಯಾಪ್​ಟಾಪ್, ಮೊಬೈಲ್ ಜಪ್ತಿ ಮಾಡಿದ್ದು, ಹಲವು ಮಹತ್ವದ ಮಾಹಿತಿ ಸಿಕ್ಕಿರುವುದಾಗಿ ತಿಳಿದು ಬಂದಿದೆ. ಲವ್ ಜಿಹಾದ್​ನಲ್ಲಿ ಪಾಲ್ಗೊಂಡಿರುವ ಅನುಮಾನದ ಮೇರೆಗೆ ಇರ್ಷಾದ್ ಖಾನ್ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.

- Advertisement -

ನಕಲಿ ಖಾತೆಯಿಂದ ಟಾರ್ಗೆಟ್?

ಹಿಂದು ಯುವತಿಯರ ಹೆಸರಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ನಕಲಿ ಖಾತೆ ತೆರೆದು ಅವುಗಳ ಮೂಲಕ ಹಿಂದು ಯುವತಿಯರನ್ನು ಸಂರ್ಪಸಿ, ಅವರ ಮನಃಪರಿವರ್ತಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದರೆಂಬುದು ವಿಚಾರಣೆ ವೇಳೆ ಮೇಲ್ನೋಟಕ್ಕೆ ಕಂಡುಬಂದಿದೆ. ಇದರಲ್ಲಿ ಇರ್ಷಾದ್ ಖಾನ್ ಪತ್ನಿಯ ಪಾತ್ರವಿರುವ ಸುಳಿವು ಸಿಕ್ಕಿದೆ ಎಂದು ಎನ್​ಐಎ ಮೂಲಗಳು ತಿಳಿಸಿವೆ. ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿರುವ ಇರ್ಷಾದ್ ಪತ್ನಿ ಹೇಳಿಕೆ ದಾಖಲಿಸಿಕೊಂಡು ಅವರಿಗೆ ಸೇರಿದ 8 ಲ್ಯಾಪ್​ಟಾಪ್ ಹಾಗೂ 12 ಮೊಬೈಲ್​ಗಳನ್ನು ಎನ್​ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಏನಿದು ಪ್ರಕರಣ?

ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ಕೇರಳ ಮೂಲದ ಯುವತಿಯನ್ನು ಪರಿಚಯಿಸಿಕೊಂಡಿದ್ದ ಬೆಂಗಳೂರಿನ ಉದ್ಯಮಿ ನಜೀರ್ ಖಾನ್ ಬಳಿಕ ಪ್ರೀತಿಸುವ ನಾಟಕವಾಡಿ, ಆಕೆಯನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿ ದೊಮ್ಮಲೂರಿನ ಡೈಮಂಡ್ ಡಿಸ್ಟ್ರಿಕ್ಟ್​ನಲ್ಲಿರುವ ಇರ್ಷಾದ್ ಮನೆಯಲ್ಲಿ 15 ದಿನಗಳ ಕಾಲ ಇರಿಸಿದ್ದ. ಇದಾದ ಬಳಿಕ ಯುವತಿಯನ್ನು ಸೌದಿ ಅರೇಬಿಯಾಗೆ ಕರೆದುಕೊಂಡು ಹೋಗಿ ನಿರಂತರ ಅತ್ಯಾಚಾರ ಎಸಗಿದ್ದ. ಅಲ್ಲಿರುವ ಕೆಲ ವ್ಯಕ್ತಿಗಳೊಂದಿಗೆ ಮಲಗುವಂತೆಯೂ ಒತ್ತಾಯಿಸುತ್ತಿದ್ದ. ದೌರ್ಜನ್ಯ ಹೆಚ್ಚಾದಾಗ ಯುವತಿ ಸೌದಿಯಿಂದ ಕೇರಳದಲ್ಲಿರುವ ತನ್ನ ಪಾಲಕರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಳು. ಯುವತಿಯ ಪಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. 2018 ಜನವರಿಯಲ್ಲಿ ಎನ್​ಐಎ ಅಧಿಕಾರಿಗಳು ಈ ಬಗ್ಗೆ ಎಫ್​ಐಆರ್ ದಾಖಲಿಸಿಕೊಂಡಿದ್ದರು. ನಜೀರ್ ಸೌದಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ, ಮಾರ್ಗಮಧ್ಯೆ ಎನ್​ಐಎ ಅಧಿಕಾರಿಗಳು ಬಂಧಿಸಿ, ಯುವತಿಯನ್ನು ರಕ್ಷಿಸಿದ್ದರು.

ಎನ್​ಐಎ ತಂಡ ಯುವತಿ ಮತ್ತು ನಜೀರ್​ನನ್ನು ವಿಚಾರಣೆ ನಡೆಸಿದಾಗ ಲವ್ ಜಿಹಾದ್​ನ ಹಿಂದೆ ಉಪ ಆಯುಕ್ತ ಇರ್ಷಾದ್ ಖಾನ್ ಪತ್ನಿಯ ಕೈವಾಡ ಬೆಳಕಿಗೆ ಬಂದಿತ್ತು.

ಎನ್​ಐಎ ಅಧಿಕಾರಿಗಳು ನಮ್ಮ ಮನೆಗೆ ಬಂದು ವಿಚಾರಣೆ ನಡೆಸಿದ್ದಾರೆ ಹೊರತು ದಾಳಿ ನಡೆದಿಲ್ಲ. ಮನೆಯಲ್ಲಿರುವ ಲ್ಯಾಪ್​ಟಾಪ್ ಮತ್ತು ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ಪತ್ನಿಗೆ ಆ ಯುವತಿ ಪರಿಚಯ ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಆ ಯುವತಿ ನಮ್ಮ ಮನೆಗೆ ಬಂದಿದ್ದಳು. ಆದರೆ, ನಾನಾಗಲಿ, ಪತ್ನಿಯಾಗಲಿ ಲವ್ ಜಿಹಾದ್ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಎನ್​ಐಎ ಯಾವುದೇ ರೀತಿಯ ತನಿಖೆ ಬೇಕಾದರೂ ಮಾಡಲಿ.

| ಇರ್ಷಾದ್ ಖಾನ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತ

ದೊಡ್ಡ ಜಾಲ

ವಶಪಡಿಸಿಕೊಂಡ ದಾಖಲೆಗಳ ಪರಿಶೀಲಿಸುತ್ತಿರುವ ಎನ್​ಐಎ ಅಧಿಕಾರಿಗಳು, ಈ ಪ್ರಕರಣದಲ್ಲಿ ದೊಡ್ಡ ಜಾಲವೇ ಭಾಗಿಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ತನಿಖೆ ಮುಂದುವರಿಸಿದ್ದಾರೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...