More

  ಸಿಲಿಕಾನ್​ ಸಿಟಿಯಲ್ಲಿ ಲವ್​ ಜಿಹಾದ್​ ಪ್ರಕರಣ: ಕಾಶ್ಮೀರಿ ಯುವಕನ ವಿರುದ್ಧ ಮಹಿಳಾ ಟೆಕ್ಕಿಯ ಗಂಭೀರ ಆರೋಪ

  ಆನೇಕಲ್: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಲವ್ ಜಿಹಾದ್ ಆರೋಪ ಮಾಡಿದ್ದು, ಆಕೆ ನೀಡಿರುವ ದೂರಿನ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

  ಆರೋಪಿಯು ಮದುವೆ ಹೆಸರಲ್ಲಿ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದ ಮತ್ತು ಯಾವುದೇ ಧಾರ್ಮಿಕ ಕಟ್ಟುಪಾಡುಗಳು ಇಲ್ಲದೆ ಕೋರ್ಟ್​ನಲ್ಲಿ ಮದುವೆಯಾಗೋಣ ಎಂದು ಆಶ್ವಾಸನೆ ನೀಡಿದ್ದ ಎಂದು ಸಂತ್ರಸ್ತೆ ಯುವತಿ ಎಫ್ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ.

  ವಿವರಣೆಗೆ ಬರುವುದಾದರೆ, ಸಂತ್ರಸ್ತೆ ಮತ್ತು ಆರೋಪಿ ಇಬ್ಬರು ಎಲೆಕ್ಟ್ರಾನಿಕ್ ಸಿಟಿಯ ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಸಂತ್ರಸ್ತೆಗೆ ಕಾಶ್ಮೀರ ಮೂಲದ ಯುವಕ ಮೊಜೀಫ್ ಅಶ್ರಫ್ ಬೇಗ್ ಎಂಬಾತನ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದ ಬಳಿಕ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ದೈಹಿಕ ಸಂಪರ್ಕ ಮಾಡಿದ್ದಾನೆ.

  ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ವಾದಕ್ಕೂ ಹಿನ್ನಡೆ

  ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಮದುವೆ ಹೆಸರಲ್ಲಿ ಆಕೆಯನ್ನು ಮತಾಂತರ ಮಾಡಲು ಆರೋಪಿ ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ. ಅಲ್ಲದೇ ನನ್ನಿಂದ ಸಾಕಷ್ಟು ಹಣ ಪಡೆದಿದ್ದು, ಹಣ ವಾಪಸ್​ ಕೇಳಿದರೆ ಜೀವ ಬೆದರಿಕೆ ಸಹ ಹಾಕುತ್ತಿದ್ದಾನೆ ಎಂದು ಸರಣಿ ಎಕ್ಸ್​ನಲ್ಲಿ ಆರೋಪಿಸಿದ್ದಾಳೆ. ನೊಂದ ಯುವತಿ ಈ ಬಗ್ಗೆ ಮೊದಲು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ ಬಳಿಕ ಹೆಬ್ಬಗೋಡಿ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದರಿಂದ ಪ್ರಕರಣವನ್ನು ಹೆಬ್ಬಗೋಡಿ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಗೋಡಿ ಪೊಲೀಸರು ಆರೋಪಿ ಟೆಕ್ಕಿ ಪತ್ತೆಗೆ ಬಲೆ ಬೀಸಿದ್ದಾರೆ.

  ಪೊಲೀಸರ ತಂಡ ಕಾಶ್ಮೀರಕ್ಕೆ ತೆರಳಿದೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506, 34, 376, 377, 420, 417 ಹಾಗೂ ಕರ್ನಾಟಕ ಧಾರ್ಮಿಕ ಸ್ವಾತಂತ್ರ ಹಕ್ಕು ರಕ್ಷಣಾ ಕಾಯ್ದೆ 2022ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

  ರೈಲ್ವೇ ನಿಲ್ದಾಣದಲ್ಲಿ ಸೂಟ್ ಕೇಸ್ ಹೊತ್ತು ಕೂಲಿ ಕಾರ್ಮಿಕರ ಕಷ್ಟ ಆಲಿಸಿದ ರಾಹುಲ್ ಗಾಂಧಿ!

  VIDEO | ಡಾನ್ಸ್​ ಮಾಡುವಾಗ ಹೃದಯಾಘಾತದಿಂದ ಪ್ರಾಣಬಿಟ್ಟ ಯುವಕ

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts