ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಕೊಳೆತ ಶವವಾಗಿ ಪತ್ತೆ: ಆತ್ಮಹತ್ಯೆ ಮಾಡಿಕೊಳ್ಳುವಂತಹ ನೋವೇನಿತ್ತು?

ಚಾಮರಾಜನಗರ: ಮದುವೆಗೆ ಪಾಲಕರು ವಿರೋಧಿಸಿದ್ದಕ್ಕೆ ಬೇಸತ್ತು ಪ್ರೇಮಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪರಸ್ಪರ ಪ್ರೀತಿಸುತ್ತಿದ್ದ ಉಗನಿಯ ಗ್ರಾಮದ ಕಿರಣ್ ಹಾಗೂ ಸಂಗೀತ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ. ಆದರೆ, ಇವರ ಮದುವೆಗೆ ಪಾಲಕರು ವಿರೋಧ ವ್ಯಕ್ತಪಡಿಸಿದ್ದರಿಂದ ಬೇಸತ್ತು ಜಾಗೇರಿ ಬಳಿಯಿರುವ ಗವಿಗಂಗಾಧರೇಶ್ವರಸ್ವಾಮಿ ಬೆಟ್ಟದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪ್ರೇಮಿಗಳಿಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *