ಕತ್ತು ಕೊಯ್ದುಕೊಂಡು ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ರಕ್ಷಿಸಿದ ಪೊಲೀಸರು

Police
Published on

ಮೈಸೂರು: ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.

ದುಗ್ಗಹಳ್ಳಿ ಗ್ರಾಮದ ಕಾವ್ಯಾ ಮತ್ತು ಕುರಿಹುಂಡಿ ಗ್ರಾಮದ ರವಿ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅಂತರ್ಜಾತಿ ಎಂಬ ಕಾರಣಕ್ಕೆ ಎರಡು ಕುಟುಂಬದಿಂದ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಸಾವಿಗೆ ಶರಣಾಗಲು ಮುಂದಾಗಿದ್ದಾರೆ.

ಕಾವ್ಯಾ ಮನೆಯಲ್ಲಿ ಯಾರು ಇಲ್ಲದ ವೇಳೆ ಇಂದು ಬೆಳಗ್ಗೆ ರವಿ ದುಗ್ಗಹಳ್ಳಿಗೆ ಆಗಮಿಸಿದ್ದಾನೆ. ಇಬ್ಬರು ಮನೆಯ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೇಗೋ ಮಾಹಿತಿ ತಿಳಿದು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪಿಎಸ್ಐ ಸುರೇಂದ್ರ ಮತ್ತು ಸಿಬ್ಬಂದಿ ರಕ್ತಸ್ರಾವದಿಂದ ನರಳುತ್ತಿದ್ದ ಪ್ರೇಮಿಗಳನ್ನು ಆಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net