More

    ಮನೆಯವರಿಂದ ಪ್ರೀತಿ ನಿರಾಕರಣೆ; 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು!

    ರಾಮನಗರ: ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವುದು ಶುಕ್ರವಾರ ನಡೆದಿದೆ.

    ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್​ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್​ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿಯೂ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ವಿಚಾರ ಮನೆಯವರಿಗೂ ತಿಳಿದಿದೆ.

    ಆದರೆ, ಇವರ ಪ್ರೀತಿಯನ್ನು ನಿರಾಕರಿಸಿದ್ದ ಎರಡೂ ಕುಟುಂಬದವರು ವ್ಯಾಸಂಗ ಮುಂದುವರಿಸುವಂತೆ ಸೂಚನೆ ನೀಡಿದ್ದರು. ಇದರಿಂದ ಮನನೊಂದ ಇಬ್ಬರೂ ಬೈಕ್​ನಲ್ಲಿ ರಾಮದೇವರ ಬೆಟ್ಟಕ್ಕೆ ತೆರಳಿದ್ದಾರೆ. ಪಾರ್ಕಿಂಗ್​ ಲಾಟ್​ನಲ್ಲಿ ಬೈಕ್​ ನಿಲ್ಲಿಸಿ, ನಂತರ ಬೆಟ್ಟಕ್ಕೆ ತೆರಳಿ, ಡೆತ್​ನೋಟ್​ ಬರೆದಿಟ್ಟು, ಬ್ಯಾಗ್​ ಮತ್ತು ಚಪ್ಪಲಿಯನ್ನು ಬಿಟ್ಟು ಬೆಟ್ಟದಿಂದ ಜಿಗಿದಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಹೋರಾಟ ಸ್ಥಗಿತ; ವಿಜಯಾನಂದ ಕಾಶಪ್ಪನವರ್ ರಾಜೀನಾಮೆ

    ಬದುಕಿದ್ದೇ ಪವಾಡ

    ನಮ್ಮ ಮನೆಯಲ್ಲಿ ಪ್ರೀತಿ ನಿರಾಕರಣೆ ಮಾಡಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್​ನಲ್ಲಿ ಬರೆದು ಸುಮಾರು 100 ಅಡಿಗೂ ಹೆಚ್ಚು ಆಳದ ಕಂದಕಕ್ಕೆ ಜಿಗಿದಿದ್ದಾರೆ. ಇಷ್ಟು ಎತ್ತರಿಂದ ಜಿಗಿದರೆ ಕಲ್ಲು ಬಂಡೆಗಳಿಂದ ಕೂಡಿರುವ ಪ್ರದೇಶದಲ್ಲಿ ಬದುಕುಳಿಯುವುದು ಕಷ್ಟ. ಆದರೆ ಇಬ್ಬರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಭದ್ರತೆಗೆ ನಿಯೋಜನೆ ಮಾಡಿರುವ ಹೋಂಗಾರ್ಡ್​ ಸಿಬ್ಬಂದಿ, ಬೆಟ್ಟದ ಮೇಲೆ ಪರಿಶೀಲನೆ ಮಾಡುತ್ತಿದ್ದ ವೇಳೆ ಚಪ್ಪಲಿ ಮತ್ತು ಬ್ಯಾಗ್​ ಇರುವುದು ಕಂಡು ಬಂದಿದೆ. ತಕ್ಷಣವೇ ಏನೋ ಅನಾಹುತ ನಡೆದಿದೆ ಎನ್ನುವುದನ್ನು ಅರಿತು, ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಇಬ್ಬರು ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. 

    ಇದನ್ನೂ ಓದಿ: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ಆಯ್ಕೆ

    ಒಂದು ಹಂತದಲ್ಲಿ ಇಬ್ಬರೂ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿತ್ತಾದರೂ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದರೆ ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದು ಕಂಡು ಬಂದಿದ್ದು, ಸುಮಾರು 3 ಗಂಟೆಗಳ ಕಾರ್ಯಾಚರಣೆ ನಡೆಸಿ ಪ್ರೇಮಿಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

    ರಾಮನಗರ ಗ್ರಾಮಾಂತರ ಪೊಲೀಸ್​ ಠಾಣೆ ಪಿಐ ಗಿರಿರಾಜ್​ ಮತ್ತು ತಂಡ, ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಾವಣಗೆರೆಯಲ್ಲಿ ನರೇಂದ್ರ ಮೋದಿ ರೋಡ್ ಶೋ; ಪ್ರಧಾನಿಗೆ ಬಿಎಸ್​ವೈ, ಬೊಮ್ಮಾಯಿ ಸಾಥ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts