ಕಾಂಗ್ರೆಸ್‌ನಿಂದ ಕೀಳುಮಟ್ಟದ ರಾಜಕಾರಣ

ಸೊರಬ: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬೆಂಗಳೂರಿನ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು, ನಟ ಶಿವರಾಜ್ ಕುಮಾರ್ ಮತ್ತು ಸಚಿವ ಮಧು ಬಂಗಾರಪ್ಪ ಅಭಿಮಾನಿಗಳು ಮುತ್ತಿಗೆ ಹಾಕಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು, ಕುಮಾರ ಬಂಗಾರಪ್ಪ ಅಭಿಮಾನಿಗಳು ಪಟ್ಟಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಲೋಕಸಭೆ ಚುನಾವಣೆ ಬಳಿಕ ಬೆಂಗಳೂರಿನಲ್ಲಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮನೆ ಮುಂದೆ ನೂರಾರು ಬಾಡಿಗೆ ಗೂಂಡಾಗಳು ಏಕಾಏಕಿ ನುಗ್ಗಿ ದಾಂಧಲೆ ನಡೆಸಿದ್ದಾರೆ. ಚುನಾವಣೆ ಸೋಲಿನ ಹತಾಶೆಯಿಂದ ಇಂತಹ ಕೃತ್ಯ ಎಸಗಿರುವುದು ಕ್ಷೇತ್ರದ ಜನತೆಗೆ ಮಾಡಿದ ಅವಮಾನ. ಸಭ್ಯತೆಗೆ ಹೆಸರಾದ ಮಾಜಿ ಸಿಎಂ ಎಸ್.ಬಂಗಾರಪ್ಪ, ಮತ್ತು ಡಾ. ರಾಜ್‌ಕುಮಾರ್ ಕುಟುಂಬದ ಹಿನ್ನೆಲೆ ಇರುವವರು ಕೀಳುಮಟ್ಟದ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಸೊರಬ ಮಂಡಲ ಅಧ್ಯಕ್ಷ ಬಿ.ಎಸ್.ಪ್ರಕಾಶ್ ಆಕ್ಷೇಪ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ಸೋಮಶೇಖರ್ ಮಾತನಾಡಿ, ಕುಮಾರ್ ಬಂಗಾರಪ್ಪ ಅವರಿಗೂ ಅಭಿಮಾನ ಬಳಗವಿದೆ ಎಂಬುದನ್ನು ನಟ ಶಿವರಾಜ್‌ಕುಮಾರ್ ತಿಳಿದುಕೊಳ್ಳಬೇಕು. ಚುನಾವಣೆ ಸಂದರ್ಭ ಪತ್ನಿ ಪರವಾಗಿ ಚುನಾವಣೆ ಪ್ರಚಾರ ಮಾಡಬೇಕೇ ವಿನಃ ಇಂತಹ ಘಟನೆಗಳಿಗೆ ಪ್ರೋತ್ಸಾಹ ನೀಡಬಾರದು. ಕುಮಾರ್ ಬಂಗಾರಪ್ಪ ಅವರು ಮನೆಯ ಹಿರಿಯ ಸದಸ್ಯರಾಗಿ ಬುದ್ಧಿಮಾತು ಹೇಳಿದ್ದಾರೆ. ಆದರೆ ಮನೆಗೆ ನುಗ್ಗಿ ದಾಂಧಲೆ ಮಾಡುವುದು ಮರುಕಳಿಸಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಪಂ ಮಾಜಿ ಸದಸ್ಯ ಗುರುಕುಮಾರ ಪಾಟೀಲ್ ಮಾತನಾಡಿ, ಶಿವಮೊಗ್ಗ ನನ್ನದು ಎಂದು ಹೇಳಿ ಚುನಾವಣೆಯಲ್ಲಿ ಸೋಲುಂಡು ನಮ್ಮ ನಾಯಕನ ಮನೆ ಮುಂದೆ ಗಲಾಟೆ ಮಾಡಿರುವುದು ಖಂಡನಿಯ. ಮಧು ಬಂಗಾರಪ್ಪ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಈ ರೀತಿಯ ಪ್ರತೀಕಾರದ ವರ್ತನೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಅಲ್ಲದೇ ಹೇಡಿತನದಿಂದ ಪ್ರತೀಕಾರಕ್ಕೆ ಮುಂದಾಗಿದ್ದೀರಿ. ಮಧು ಬಂಗಾರಪ್ಪ, ಗೀತಾ ಹಾಗೂ ನಟ ಶಿವರಾಜ್‌ಕುಮಾರ್ ಇಡೀ ಜಿಲ್ಲೆಯ ಜನರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಕುಮಾರ್ ಬಂಗಾರಪ್ಪ ಅವರ ಅಭಿಮಾನಿಗಳು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪುರಸಭಾ ಸದಸ್ಯ ಎಂ.ಡಿ.ಉಮೇಶ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪ್ರಕಾಶ್, ದೇವೇಂದ್ರಪ್ಪ, ಮಲ್ಲಿಕಾರ್ಜುನ, ವಿನಾಯಕಪ್ಪ, ಜಾನಕಪ್ಪ, ಸಂಜಯ್, ಗುರುಮೂರ್ತಿ ಇತರರಿದ್ದರು.

Share This Article

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ