

ಇನ್ನುಮುಂದೆ 14.2 ಕೆ.ಜಿಯ ಎಲ್‌ಪಿಜಿ ಸಿಲಿಂಡರ್ ಬೆಲೆ 803 ರೂ. ಯಿಂದ 853 ಕ್ಕೆ ಏರಿಕೆಯಾಗಲಿದೆ. ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ರೂ. 503 ಕ್ಕೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್, ಇನ್ನು ಮುಂದೆ ರೂ.553ಕ್ಕೆ ಸಿಗಲಿದೆ.
cylinder| ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ನ ಬೆಲೆಯನ್ನು 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ. ಉಜ್ವಲ ಯೋಜನೆಯ ಫಲಾನುಭವಿಗಳು ಮತ್ತು ಸಾಮಾನ್ಯ ಗ್ರಾಹಕರು ಇಬ್ಬರಿಗೂ ಈ ಬೆಲೆ ಏರಿಕೆ ಅನ್ವಯವಾಗಲಿದೆ ಎಂದು ಅವರು ಹೇಳಿದ್ದಾರೆ.