More

    ಲಿಂ.ಹಾನಗಲ್ಲ ಶ್ರೀಗಳ ಕಾರ್ಯ ಸ್ಮರಣೀಯ

    ಘಟಪ್ರಭಾ: ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ಕೊಡಿಸುವ ಮೂಲಕ ಸಮಾಜಕ್ಕೆ ಸಂಜೀವಿನಿಯಂತಾದ ಹಾನಗಲ್ ಕುಮಾರ ಶಿವಯೋಗಿಗಳ ಜಯಂತಿಯನ್ನು ಪ್ರತಿ ವರ್ಷ ಎಲ್ಲ ಶಾಲೆ-ಕಾಲೇಜು ಹಾಗೂ ಸರ್ಕಾರಿ ಕಚೇರಿಯಲ್ಲಿ ಆಚರಣೆ ಮಾಡಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ಧಾರಕ್ಕೆ ಬರಬೇಕು ಎಂದು ಮೂರುಸಾವಿರ ಮಠದ ಶಾಖಾಮಠವಾಗಿರುವ ಘಟಪ್ರಭಾ ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠದ ಪೀಠಾಧಿಕಾರಿ, ಮುಂಡರಗಿ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಸ್ವಾಮೀಜಿ ಆಗ್ರಹಿಸಿದ್ದಾರೆ.

    ಇತ್ತೀಚೆಗೆ ಸಮೀಪದ ಶಿರಢಾಣದ ಡಾ.ಗಂಗಾಧರ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ 153 ಜಯಂತ್ಯುತ್ಸವದಲ್ಲಿ ಮಾತನಾಡಿ, ಮಹಾಪುರುಷರ ಜಯಂತಿ ಆಚರಿಸುತ್ತಿರುವ ಹಾಗೇ ಲಿಂಗೈಕ್ಯ ಹಾನಗಲ್ಲ ಕುಮಾರ ಶಿವಯೋಗಿಗಳ ಜಯಂತಿಯನ್ನು ರಾಜ್ಯಸರ್ಕಾರ ಸಾರ್ವತ್ರಿಕವಾಗಿ ಆಚರಿಸಿದರೆ ಹಾನಗಲ್ಲ ಕುಮಾರ ಶಿವಯೋಗಿಗಳು ಸಮಾಜಕ್ಕೆ ನೀಡಿದ ಕೊಡುಗೆಗೆ ಗೌರವ ನೀಡಿದಂತಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.

    ಹಾನಗಲ್ಲ ಕುಮಾರ ಶಿವಯೋಗಿಗಳು ಆಗಿನ ಕಾಲದಲ್ಲಿ ಸರ್ಕಾರಿ ಶಾಲೆಗಳು ಕಡಿಮೆ ಇದ್ದ ಸಂದರ್ಭದಲ್ಲಿ ಖಾಸಗಿ ಶಾಲೆಗಳನ್ನು ತೆರೆಯಲು ಉತ್ತೇಜಿಸಿ ರಾಜ್ಯದ ಮೂಲೆ ಮೂಲೆಗಳಲ್ಲಿ ಶಿಕ್ಷಣ ಬೆಳೆಸಿ, ಶೈಕ್ಷಣಿಕ ಕೇತ್ರದ ಅಭಿವೃದ್ಧಿಗೆ ಶ್ರಮಿಸಿದರು. ಮಠ-ಮಂದಿರಗಳಿಗೆ ಧರ್ಮ ಗುರುಗಳಾಗುವವರು ಹೀಗೆಯೆ ಇರಬೇಕು. ಅವರ ಕರ್ತವ್ಯ ಏನು?
    ಎನ್ನುವ ಬಗ್ಗೆ ಶಿವಯೋಗ ಮಂದಿರವನ್ನು ಸ್ಥಾಪಿಸಿ ಅವರಿಗೆ ಅಲ್ಲಿ ಶಿಕ್ಷಣ, ಸಾಹಿತ್ಯ, ಪಾಂಡಿತ್ಯ, ಸಂಸ್ಕೃತವನ್ನು ಕಲಿಸಿ ಸಮಾಜವನ್ನು ಒಳ್ಳೆಯ ಮಾರ್ಗದಲ್ಲಿ ನಡೆಯುವಂತೆ ಮಾಡಿದ ಮಹಾಸಾಧಕರು ಎಂದು ಶ್ರೀಗಳ ಕಾರ್ಯವನ್ನು ಸ್ಮರಿಸಿದರು.

    ಹುಕ್ಕೇರಿ ವಿರಕ್ತಮಠದ ಶಿವಬಸವ ಸ್ವಾಮೀಜಿ, ಹುಬ್ಬಳಿಯ ಶಿವಾನಂದ ದೇವರು, ಅಕ್ಕಲಕೋಟದ ಚನ್ನಬಸವ ದೇವರು, ಆಡಳಿತ ಮಂಡಳಿ ನಿರ್ದೇಶಕರು, ಪ್ರಾಚಾರ್ಯ ಸುಭಾಷ ಭರಮರಾವತ ಹಾಗೂ ಸಿಬ್ಬಂದಿ, ಗ್ರಾಮಸ್ಥರು, ಭಕ್ತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts