More

    ಚುನಾವಣೆ ವೇಳೆ ಮತದಾರರಿಗೆ ಆಮಿಷ : ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

    ಬೆಂಗಳೂರು: ಚುನಾವಣಾ ಪೂರ್ವ,ಚುನಾವಣೆ ಸಂದರ್ಭದಲ್ಲಿ ಹಾಗೂ ಚುನಾವಣಾ ನಂತರದ ಭ್ರಷ್ಟಾಚಾರ, ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

    ಈ ವಿಚಾರ ಸಂಬಂಧ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗೌತಮ್ ಎಂ.ಗೌಡ ಹಾಗೂ ಇನ್ನಿತರರು ಸೇರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ ನಡೆಸಿತು.

    ವಿಚಾರಣೆ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಭಾರತ ಚುನಾವಣಾ ಆಯೋಗ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ. 1ಕ್ಕೆ ಮುಂದೂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts