ಬೆಳಗಾವಿ : ಮಾ. 30 ರಾಷ್ಟ್ರಮಟ್ಟದ ಸಾಂಸ್ಕೃತಿಕ ಹಬ್ಬ

ಚಿಕ್ಕೋಡಿ: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಬಸವಪ್ರಭು ಕೋರೆ ಬಿಸಿಎ ಮಹಾವಿದ್ಯಾಲಯದಲ್ಲಿ ಮಾ.30 ಹಾಗೂ 31 ರಂದು ಎರಡು ದಿನಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಹಬ್ಬ ಟೆಕ್ನೋ ಬ್ಲೂಂ-2019 ಆಯೋಜಿಸಲಾಗಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಂ.ಟಿ.ಕುರಣಿ ವಹಿಸಲಿದ್ದಾರೆ. ಧಾರವಾಡ ಐಐಟಿ ಗಣಕಯಂತ್ರ ವಿಭಾಗದ ಮುಖ್ಯಸ್ಥ ಡಾ.ರಾಜೇಂದ್ರ ಹೆಗಡೆ ಸಮಾರಂಭ ಉದ್ಘಾಟಿಸಲಿದ್ದಾರೆ. ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ ಗಸ್ತಿ ಕಿರು ನಾಟಕ ಸ್ಪರ್ಧೆಗೆ ತೀರ್ಪುಗಾರರಾಗಿ ಆಗಮಿಸಲಿದ್ದು, ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜನರನ್ನು ರಂಜಿಸಲಿದ್ದಾರೆ. 90ರ ದಶಕದ ಹಾಡುಗಳು, ಚಿತ್ರಕಲೆ, ದೇಶಭಕ್ತಿಯ ಕಿರುನಾಟಕಗಳು, ರಸಪ್ರಶ್ನೆ, ನೃತ್ಯ ಮತ್ತು ಗಣಕಯಂತ್ರದ ಆಟ ಸೇರಿ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ವಿ.ಸಿ.ಹಳ್ಳೂರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *