More

  ಹುಟ್ಟೂರಲ್ಲೇ ಚಿದಾನಂದ ಮೂರ್ತಿಯವರ ಅಂತ್ಯಕ್ರಿಯೆ ನಡೆಸಲು ಆಗ್ರಹಿಸಿ ಪ್ರತಿಭಟನೆ: ಚಿಮೂ ಆಸೆಯೇ ಬೇರೆ…

  ದಾವಣಗೆರೆ: ಇಹಲೋಕ ತ್ಯಜಿಸಿದ ಚಿಂತಕ, ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿಯವರ ಅಂತ್ಯಕ್ರಿಯೆಯನ್ನು ಹುಟ್ಟೂರಲ್ಲೇ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ವ್ಯಕ್ತವಾಗುತ್ತಿದೆ.

  ಹುಟ್ಟೂರಾದ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲೇ ನಡೆಸಬೇಕೆಂಬುದು ಗ್ರಾಮಸ್ಥರು ಹಾಗೂ ಶಾಲಾ-ಕಾಲೇಜು ವಿಧ್ಯಾರ್ಥಿಗಳ ಆಗ್ರಹವಾಗಿದೆ. ಹೀಗಾಗಿ ಕೋಗಲೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿಯ ದೇವಸ್ಥಾನದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

  ಆದರೆ, ತನ್ನ ಅಂತಿಮ ಸಂಸ್ಕಾರವನ್ನು ಹಂಪಿಯಲ್ಲಿ ನಡೆಸಬೇಕೆಂಬುದು ಚಿಮೂ ಅವರ ಆಸೆಯಾಗಿತ್ತಂತೆ. ಹೀಗೆಂದು ಅವರ ಪುತ್ರ ವಿನಯಕಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಲ್ಲದೆ, ತಂದೆಯವರ ದೇಹ ದಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

  ನ್ಯೂಮೋನಿಯ ಕಾಯಿಲೆಯಿಂದ ಬಳಲುತ್ತಿದ್ದ ಚಿಮೂ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts