More

    ಹಂಪಿ ಸ್ಮಾರಕಗಳ ಉಳಿವಿಗಾಗಿ ಹೋರಾಡಿದ್ದ ಹಿರಿಯ ಸಂಶೋಧಕ ಡಾ. ಚಿದಾನಂದ ಮೂರ್ತಿ ವಿಧಿವಶ

    ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಂಶೋಧಕ ಡಾ. ಚಿದಾನಂದ ಮೂರ್ತಿ(88) ಅವರು ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಚಿದಾನಂದ ಅವರು ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚಂದ್ರಲೇಔಟ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆಯ ನಂತರ ವಿಜಯನಗರದ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಚಿದಾನಂದ ಅವರು 1931ರ ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೊಗಲೂರಿನಲ್ಲಿ ಜನಿಸಿದರು. ಹಂಪಿ ಸ್ಮಾರಕಗಳ ಉಳಿವಿಗಾಗಿ ಹೋರಾಡಿದ್ದರು. ಕನ್ನಡದ ಲೇಖಕ, ವಿದ್ವಾಂಸಕ, ಸಂಶೋಧಕ, ಇತಿಹಾಸಜ್ಞ ಹಾಗೂ ಪ್ರಾಧ್ಯಾಪಕರಾಗಿಯೂ ಡಾ.ಚಿದಾನಂದ ಮೂರ್ತಿ ಅವರು ಸೇವೆ ಸಲ್ಲಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts