More

    ಮೃದು ಕೌಶಲ್ಯ ಬದುಕಿಗೆ ಅಗತ್ಯ: ಗಣನಾಥ ಎಕ್ಕಾರು

    ಉಡುಪಿ: ಮೃದು ಕೌಶಲ್ಯಗಳು ಇಂದಿನ ಜೀವನದಲ್ಲಿ ಅತೀ ಅಗತ್ಯವಾಗಿದೆ. ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ನಿವೃತ್ತ ರಾಜ್ಯ ಎನ್​. ಎಸ್​. ಎಸ್​. ಅಧಿಕಾರಿ ಡಾ. ಗಣನಾಥ ಎಕ್ಕಾರು ಹೇಳಿದರು.

    ಬ್ರಹ್ಮಗಿರಿ ರೆಡ್​ಕ್ರಾಸ್​ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಎಂ.ಜಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್​ ನ್ಯಾಯಾಧೀಶೆ ಶರ್ಮಿಳಾ ಎಸ್​., ಡಾ. ಪ್ರಸಾದ್​ ರಾವ್​ ಎಂ., ಡಾ. ನಿಕೇತನ, ಡಾ. ಕೀರ್ತಿ ಮತ್ತು ಪ್ರೊ.ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಡಾ. ಜಿ. ಶಂಕರ್​ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್​ ಶೆಟ್ಟಿ, ಎಂ.ಜಿ.ಎಂ. ಕಾಲೇಜಿನ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಟಿ. ರಂಗ ಪೈ ಉಪಸ್ಥಿತರಿದ್ದರು. ದೀಕ್ಷಿತಾ ಸ್ವಾಗತಿಸಿ, ಪ್ರಣತಿ ನಿರೂಪಿಸಿ, ರಕ್ಷಿತಾ ವಂದಿಸಿದರು. ಶಿಬಿರದಲ್ಲಿ ಬೀಚ್​ ಸ್ವಚ್ಛತೆ, ಸ್ವಚ್ಛತಾ ಕಾರ್ಯಕ್ರಮ ಹಾಗೂ ವಿವಿಧ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts