ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಪ್ರಬಲ ಆಕಾಂಕ್ಷಿ: ರೇಣುಕಾಚಾರ್ಯ

M P Renukacharya
Published on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ರಲ್ಲಿ ಹೀನಾಯ ಸೋಲು ಅನುಭವಿಸಿದ್ದ ಸಂದರ್ಭದಲ್ಲಿ ಹೊನ್ನಾಳಿಯ ರೇಣುಕಾಚಾರ್ಯ ಬೆಂಬಲಿಗರ ಮುಂದೆ ಕಣ್ಣೀರು ಹಾಕುತ್ತಾ, ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದರು. ಇದೀಗ ಉಲ್ಟಾ ಹೊಡೆದಿರುವ ರೇಣುಕಾಚಾರ್ಯ, ಮುಂದಿನ ಲೋಕಸಭೆ ಚುನಾವಣೆಯಲ್ಲಿ 'ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಪ್ರಬಲ ಆಕಾಂಕ್ಷಿ' ಎಂಬ ಸಂದೇಶವನ್ನು ಪಕ್ಷದ ವರಿಷ್ಠರಿಗೆ ರವಾನಿಸಿದ್ದಾರೆ.

'ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಪ್ರಬಲ ಆಕಾಂಕ್ಷಿ. ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನರ ಒತ್ತಾಯಕ್ಕೆ ಮಣಿದು ಈ ಮಾತನ್ನು ಹೇಳುತ್ತಿದ್ದೇನೆ' ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸದ್ಯ ಈ ವಿಚಾರ ಬಿಜೆಪಿ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ನಿರಾಶರಾಗಿದ್ದ ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಬಗ್ಗೆ ತಿಳಿಸಿದ್ದರು. ಈ ನಿರ್ಧಾರಕ್ಕೆ ಅಭಿಮಾನಿಗಳು, ಬೆಂಬಲಿಗಲು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಬಹಿರಂಗವಾಗಿ ನಾನು ದಾವಣಗೆರೆ ಲೋಕಸಭೆ ಕ್ಷೇತ್ರದ ಆಕಾಂಕ್ಷಿ ಎಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ.

ನಳಿನ್ ಕುಮಾರ್ ಕಟೀಲ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ: ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧ ಕೆಲವರು ನೇರವಾಗಿ ಟೀಕೆ ಮಾಡಿದರು. ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ಯಡಿಯೂರಪ್ಪ ಪರ ಮಾತನಾಡಿದೆ ಪಕ್ಷ ವಿರೋಧಿ. ವಿರುದ್ದ ಮಾತನಾಡಿದರೆ ಪಕ್ಷದ ಪರ ಎನ್ನುತ್ತಾ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಹೇಳದೆ ನಳಿನ್ ಕುಮಾರ್ ಕಟೀಲ್​ಗೆ ರೇಣುಕಾಚಾರ್ಯ ಟಾಂಗ್ ಕೊಟ್ಟರು.

'ನಿಮ್ಮ ಅಧ್ಯಕ್ಷತೆಯಲ್ಲಿ ಬಿಜೆಪಿ ಹೀ‌ನಾಯ ಸೋಲು ಕಂಡಿದೆ. ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ. ಪಕ್ಷ ಕಟ್ಟಿದವರು ಬಿ.ಎಸ್. ಯಡಿಯೂರಪ್ಪ, ಅನಂತ ಕುಮಾರ ಹೆಗಡೆ, ಕೆ.ಎಸ್. ಈಶ್ವರಪ್ಪ, ಜಗದೀಶ ಶೆಟ್ಟರ್‌ ಮುಂತಾದವರು' ಎನ್ನುತ್ತಾ ನಳಿನ್ ಕುಮಾರ್ ಕಟೀಲ್ ಅವರಲ್ಲಿ ರಾಜೀನಾಮೆಗೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net