ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ಗೆ ಕರೊನಾ ಸೋಂಕು ದೃಢ

ramesh
Published on

ನವದೆಹಲಿ: ದೇಶದಲ್ಲಿ ಕರೊನಾ ಸೋಂಕಿನ ಎರಡನೇ ಅಲೆ ಅತಿ ತೀವ್ರವಾಗಿ ಹಬ್ಬುತ್ತಿದ್ದು, ಕೇಂದ್ರ ಶಿಕ್ಷಣ ಸಚಿವ ರಮೇರ್ಶ್ ಪೋಖ್ರಿಯಾಲ್​ ನಿಶಾಂಕ್​ ಅವರಿಗೆ ಇಂದು ಸೋಂಕು ದೃಢವಾಗಿದೆ. ಈ ವಿಚಾರವಾಗಿ ಅವರು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.

ನನಗೆ ಕರೊನಾ ಸೋಂಕು ದೃಢವಾಗಿದೆ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯಮಾಡಿ ಕರೊನಾ ಪರೀಕ್ಷೆಗೆ ಒಳಗಾಗಿ ಎಂದು ಅವರು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ದೇಶದಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಾಗುತ್ತಿದೆ. ಮೊದಲನೇ ಅಲೆಗಿಂತ ಅತಿ ವೇಗವಾಗಿ ಎರಡನೇ ಅಲೆಯಲ್ಲಿ ಸೋಂಕು ಹಬ್ಬುತ್ತಿದೆ. ಪ್ರತಿ ದಿನ 2 ಲಕ್ಷಕ್ಕೂ ಅಧಿಕ ಪ್ರಕರಣಗಳು ದೃಢವಾಗುತ್ತಿವೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net