ಸಿನಿಮಾ

ಚುನಾವಣೆ ಸಂದರ್ಭದಲ್ಲಿ ಮಾತ್ರ ಬರುವ ವ್ಯಕ್ತಿ ನಾನಲ್ಲ

ಆನೇಕಲ್: ಕೋಡಿ ಚಿಕ್ಕನಹಳ್ಳಿ ಗ್ರಾಮದ ಹೆಸರು ಬದಲಾವಣೆ ಮಾಡುತ್ತೇವೆ ಎಂದು ಕಾಂಗ್ರೆಸ್‌ನವರು ದಾರಿ ತಪ್ಪಿಸಲು ಮುಂದಾಗಿದ್ದು, ಜನರು ಇದನ್ನು ನಂಬಬಾರದು ಬೊಮ್ಮನಹಳ್ಳಿ ಎಂದು ಶಾಸಕ ಎಂ. ಸತೀಶ್ ರೆಡ್ಡಿ ಹೇಳಿದ್ದಾರೆ.

ಭಾನುವಾರ ಕೋಡಿಚಿಕ್ಕನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಬಂದುಹೋಗುವ ವ್ಯಕ್ತಿ ನಾನಲ್ಲ. ಪ್ರತಿ ಬಾರಿ ಜನರ ಜತೆಗಿದ್ದು ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನವರಿಗೆ ಈ ಕ್ಷೇತ್ರದಲ್ಲಿ ಮತ ಕೇಳುವ ಯಾವುದೇ ಹಕ್ಕು ಇಲ್ಲ ಎಂದು ಹೇಳಿದರು.

ಬೊಮ್ಮನಹಳ್ಳಿಯಲ್ಲಿ ಪ್ರತಿ ವರ್ಷ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದೇವೆ. ಕಾಂಗ್ರೆಸ್‌ನವರು ಅಂಬೇಡ್ಕರ್ ಅವರನ್ನು ಸೋಲಿಸಿದ ಪಕ್ಷ; ಈ ಪಕ್ಷಕ್ಕೆ ಮತ ನೀಡಿದರೆ ಅದು ವ್ಯರ್ಥ ಎಂದರು.

ಕಾಂಗ್ರೆಸ್ ಪಕ್ಷ ಗೆಲ್ಲುವುದಿಲ್ಲ ಎಂದು ಈಗಾಗಲೇ ಹತಾಶರಾಗಿ ಮಾತನಾಡುತ್ತಿದ್ದಾರೆ. ನನ್ನ ತಂದೆ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡರು, ಆದರೆ ನಾನು ಆ ನೋವಿನಲ್ಲೂ ಕೆಲಸ ಮಾಡಿದ್ದೇನೆ. ನಾನು ಮಾಡಿದ ಅಭಿವೃದ್ಧಿ ಕಾರ್ಯವನ್ನು ನೋಡಿ ಮತ ನೀಡಿ ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಮುನಿವೆಂಕಟಪ್ಪ, ರಾಜಶೇಖರ್, ಶಾಂತಕುಮಾರ್‌ ಮತ್ತಿತರರಿದ್ದರು.

Latest Posts

ಲೈಫ್‌ಸ್ಟೈಲ್